ಮುಲ್ಕಿ ಸೀಮೆ ಅರಸು ಕಂಬಳ ಸಮಿತಿ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

ಮುಲ್ಕಿ: ಮುಲ್ಕಿ ಸೀಮೆಯ ಅರಸು ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಕೋಲ್ನಾಡುಗುತ್ತು ಆಯ್ಕೆಯಾಗಿದ್ದಾರೆ.
ಸೀಮೆಯ ಅರಸರಾದ ದುಗ್ಗಣ್ಣ ಸಾವಂತರ ನೇತೃತ್ವದಲ್ಲಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಕೋಲ್ನಾಡುಗುತ್ತು, ಕಾರ್ಯದರ್ಶಿಯಾಗಿ ಶ್ಯಾಮ್ ಪ್ರಸಾದ್, ಕೋಶಾಧಿಕಾರಿಯಾಗಿ ನವೀನ್ ಕುಮಾರ್ ಬಾಂದಕೆರೆ,
ಉಪಾಧ್ಯಕ್ಷರಾಗಿ ಶಶಿಂದ್ರ ಸಾಲ್ಯಾನ್, ಜೊತೆ
ಕಾರ್ಯದರ್ಶಿಯಾಗಿ ಪುರುಷೋತ್ತಮರಾವ್
ಹಾಗೂ ಹಿಂದಿನ ಉಪಾಧ್ಯಕ್ಷರುಗಳನ್ನು ಹಾಗೂ ಸದಸ್ಯರುಗಳನ್ನು ಪುನರಾಯ್ಕೆ ಮಾಡಲಾಯಿತು. ಸಭೆಯಲ್ಲಿ ಬಂಕಿ ನಾಯಕರು, ಮುಲ್ಕಿ ಅರಮನೆಯ ಗೌತಮ್ ಜೈನ್, ನವೀನ್ ಶೆಟ್ಟಿ ಎಡ್ಮೆಮಾರ್, ದರ್ಶನ್ ಮತ್ತಿತರರು
ಉಪಸ್ಥಿತರಿದ್ದರು.

error: Content is protected !!