ಸುರತ್ಕಲ್: ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಬಗ್ಗೆ ಫೇಸ್ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ನ್ಯಾಯಾಲಯಕ್ಕೆ ಶರಣಾಗಿರುವ ಆರೋಪಿ ಕೆ.ಆರ್. ಶೆಟ್ಟಿ ಅಡ್ಯಾರ್ ಪದವು ಎಂಬಾತನ ಜಾಮೀನು ಅರ್ಜಿಯನ್ನು ನ್ಯಾಯಾಲಯ ನಿರಾಕರಿಸಿದೆ.
ಆರೋಪಿಗೆ ನ್ಯಾಯಾಂಗ ಸೆರೆ ವಿಧಿಸಲಾಗಿದೆ. ಆರೋಪಿ ಕೆ. ಆರ್. ಶೆಟ್ಟಿ ತನ್ನ ಫೇಸ್ಬುಕ್ ಪೇಜ್ ನಲ್ಲಿ ಪ್ರತಿಭಾ ಕುಳಾಯಿ ಟೋಲ್ ಗೇಟ್ ಪ್ರತಿಭಟನೆ ಸಂದರ್ಭದ ಫೋಟೋ ಪ್ರಕಟಸಿ ಅಸಭ್ಯವಾಗಿ ಪೋಸ್ಟ್ ಮಾಡಿದ್ದು ಅದಕ್ಕೆ ಕಹಳೆ ನ್ಯೂಸ್ ಸಂಪಾದಕ. ಶ್ಯಾಮ್ ಸುದರ್ಶನ್ ಭಟ್ ಎಂಬಾತ ಅಶ್ಲೀಲ ಕಮೆಂಟ್ಸ್ ಹಾಕಿದ್ದ. ಈ ಬಗ್ಗೆ ಪ್ರತಿಭಾ ಕುಳಾಯಿ ಕಮಿಷನರ್ ಅವರಿಗೆ ದೂರು ನೀಡಿದ್ದರು. ಮಹಿಳಾ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿ ಕೆ.ಆರ್. ಶೆಟ್ಟಿ ನ್ಯಾಯಾಲಯಕ್ಕೆ ಶರಣಾಗಿದ್ದು ಶ್ಯಾಮ್ ಭಟ್ ಇನ್ನೂ ತಲೆಮರೆಸಿಕೊಂಡಿದ್ದಾನೆ.