ಸುರತ್ಕಲ್: ಇಲ್ಲಿನ ಅಕ್ರಮ ಟೋಲ್ ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಇಂದಿನಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಪ್ರತಿಭಟನೆ ಆರಂಭಿಸಿದ್ದು ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಮನೆಯಿಂದಲೇ ಚಾಪೆ, ದಿಂಬು ತಂದು ಧರಣಿ ಸ್ಥಳದಲ್ಲಿ ಮಲಗಿ ರಾತ್ರಿ ಕಳೆದಿದ್ದಾರೆ.
ಈ ವೇಳೆ ಮಾತಾಡಿದ ಅವರು, “ಜನರಿಗೆ ಬೇಡವಾದ ಟೋಲ್ ಗೇಟ್ ಅನ್ನು ಸರಕಾರ ತೆರವು ಮಾಡಲೇಬೇಕು. ಸಂಸದರು ಹೇಳುವಂತೆ ಇನ್ನಷ್ಟು ಕಾಲಾವಕಾಶ ಕೊಡಲು ಸಾಧ್ಯವಿಲ್ಲ. ಟೋಲ್ ತೆರವುಗೊಳ್ಳದ ಹೊರತು ಇಲ್ಲಿಂದ ಕದಲುವುದಿಲ್ಲ” ಎಂದರು.
ಬೆಳಗ್ಗೆ 10 ಗಂಟೆಯಿಂದಲೇ ಹೋರಾಟ ಸಮಿತಿ ಮುಖಂಡರು, ಸದಸ್ಯರು ಟೋಲ್ ಮುಂಭಾಗದಲ್ಲಿ ಹಗಲು ರಾತ್ರಿ ಧರಣಿ ಆರಂಭಿಸಿದ್ದಾರೆ.
ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ, ಡಿವೈ ಎಫ್ ಐ ಮುಖಂಡ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಜ್, ಹ್ಯಾರಿಸ್ ಬೈಕಂಪಾಡಿ, ರಾಘವೇಂದ್ರ ರಾವ್ ಮತ್ತಿತರರು ಇದ್ದರು.