ಸುರತ್ಕಲ್: ಇಲ್ಲಿನ ಎನ್ ಐಟಿಕೆ ಅಕ್ರಮ ಟೋಲ್ ಗೇಟ್ ವಿರುದ್ಧ ನಡೆಯುತ್ತಿರುವ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಎರಡನೇ ದಿನವಾದ ನಿನ್ನೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮುಹಮ್ಮದ್ ನಲಪಾಡ್ ಭೇಟಿ ನೀಡಿ ಬೆಂಬಲ ಸೂಚಿಸಿದರು.
ಬಳಿಕ ಮಾತನಾಡಿದ ಅವರು ಬಿಜೆಪಿ ರಾಜ್ಯಾಧ್ಯಕ್ಷ
ನಳಿನ್ ಕುಮಾರ್ ಕಟೀಲು ಅವರ ತವರಿನಲ್ಲಿಯೇ
ಅಕ್ರಮ ಟೋಲ್ ಸುಲಿಗೆ ನಡೆಯುತ್ತಿರುವುದು
40 ಪರ್ಸಂಟ್ ಸರಕಾರದ ನೀತಿಗೆ ಅನುಗುಣವಾಗಿದೆ.
ಈ ಅಕ್ರಮ ಟೋಲ್ ಗೇಟ್ ತೆರವು ಆಗುವವರೆಗೆ
ಯುವ ಕಾಂಗ್ರೆಸ್ ಈ ಹೋರಾಟಗಾರರ ಜೊತೆಗಿರಲಿದೆ
ಎಂದರು.