ಹೆಚ್ ಪಿಸಿಎಲ್ ನಿಂದ ದೇಶದಲ್ಲೇ ಮೊದಲ ಏಥರ್ ಕಂಪೆನಿಯ ವೆಹಿಕಲ್ ಚಾರ್ಜಿಂಗ್ ವ್ಯವಸ್ಥೆ ಸುರತ್ಕಲ್ ನಲ್ಲಿ ಶನಿವಾರ ಪ್ರಾರಂಭ

ಸುರತ್ಕಲ್:“ದೇಶದಲ್ಲೇ ಮೊದಲ ಬಾರಿಗೆ ಹಿಂದೂಸ್ತಾನ್ ಪೆಟ್ರೋಲಿಯಂ (ಹೆಚ್ ಪಿಸಿಎಲ್) ಏಥರ್ ಕಂಪೆನಿಯ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ವ್ಯವಸ್ಥೆಯನ್ನು ತನ್ನ ಒಡೆತನದ ಪೆಟ್ರೋಲ್ ಪಂಪ್ ಆಗಿರುವ ಸುರತ್ಕಲ್ ನ ವಿಜಯ ಫ್ಯೂಲ್ ಪಾರ್ಕ್ ನಲ್ಲಿ ಶನಿವಾರದಿಂದ ಪ್ರಾರಂಭಿಸಲಿದೆ ಎಂದು ಸಂಸ್ಥೆಯ ಏರಿಯಾ ಸೇಲ್ಸ್ ಮೆನೇಜರ್ ಕೆ. ಉದಯ ಶಂಕರ್ ಶೆಟ್ಟಿ ಹಾಗೂ ವಿಜಯ ಫ್ಯೂಲ್ ಪಾರ್ಕ್ ಮಾಲಕ ದಯಾನಂದ ಡಿ. ಶೆಟ್ಟಿ ಹೇಳಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, “ಹಿಂದೂಸ್ತಾನ್ ಪೆಟ್ರೋಲಿಯಂ ದೇಶದಲ್ಲೇ ಮೊದಲ ವೆಹಿಕಲ್ ಚಾರ್ಜಿಂಗ್ ವ್ಯವಸ್ಥೆಯನ್ನು ಅಳವಡಿಸಿದ್ದು ಮುಂದಿನ ದಿನಗಳಲ್ಲಿ ಹಿಂದೂಸ್ತಾನ್ ಪೆಟ್ರೋಲಿಯಂ ಪಂಪ್ ನ ಎಲ್ಲಾ ಪಂಪ್ ಗಳಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗುವುದು” ಎಂದರು.

ವಿಜಯ ಫ್ಯೂಲ್ ಪಾರ್ಕ್ ನಲ್ಲಿ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆಯಿದ್ದು ಡಿಸೆಂಬರ್ ಅಂತ್ಯದವರೆಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಉಚಿತ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುತ್ತಿದ್ದು ಜನರು ಇದರ ಪ್ರಯೋಜನ ಪಡೆಯಬಹುದಾಗಿದೆ.
ಶನಿವಾರ ಮುಂಜಾನೆ 11 ಗಂಟೆಗೆ ಮಂಗಳೂರು ಉತ್ತರ ಶಾಸಕ ವೈ. ಭರತ್ ಶೆಟ್ಟಿ ಉದ್ಘಾಟಿಸಲಿದ್ದು, ಹೆಚ್ ಪಿಸಿ ಎಲ್ ನ ರಿಟೇಲ್ ವಿಭಾಗದ ಡಿಜಿಎಂ ನವೀನ್ ಕುಮಾರ್ ಎಂ.ಜಿ. ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಹೆಚ್ ಪಿಸಿಎಲ್ ಸೇಲ್ಸ್ ಮೆನೇಜರ್ ಕೆ. ಉದಯ್ ಶಂಕರ್ ಶೆಟ್ಟಿ, ವಿಜಯ ಫ್ಯೂಲ್ಸ್ ಮಾಲಕ ದಯಾನಂದ ಡಿ. ಶೆಟ್ಟಿ, ಏಥರ್ ಕಂಪನಿಯ ಭರತ್ ಕುಮಾರ್ ಉಪಸ್ಥಿತರಿದ್ದರು.

error: Content is protected !!