“ಬಡ ಕುಟುಂಬಗಳಿಗೆ ಮನೆ ನಿರ್ಮಾಣದ ಕನಸು ಶೀಘ್ರವೇ ನನಸು” -ಶಾಸಕ ಭರತ್ ಶೆಟ್ಟಿ

ಸುರತ್ಕಲ್:ಇಡ್ಯಾ ಪೂರ್ವ ವಾರ್ಡ್ 6ರ ನವನಗರದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 14 ಕೋಟಿ ರೂಪಾಯಿ ವೆಚ್ಚದಲ್ಲಿ 192 ಕುಟುಂಬಗಳಿಗೆ ನಿರ್ಮಾಣಗೊಳ್ಳುತ್ತಿರುವ ನೂತನ ವಸತಿ ಸಮುಚ್ಚಯ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಅವರು ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು.ಈ ಸಂದರ್ಭ ಮಾತನಾಡಿದ ಅವರು ಬಡ ಕುಟುಂಬಗಳಿಗೆ ಸ್ವಂತ ಮನೆ ಒಂದು ಕನಸಾಗಿರುತ್ತದೆ.

ಹೀಗಾಗಿ ಈ ಹಿಂದೆ ನೀಡಿದಂತೆ ಸೈಟ್ಗಳನ್ನ ನೀಡಲು ಸರಕಾರಿ ಭೂಮಿಯ ಕೊರತೆ ಇರುವುದರಿಂದ ಸರಕಾರವೇ ಸುಸಜ್ಜಿತ ವಸತಿ ಸಮುಚ್ಚಯ ನಿರ್ಮಿಸಿ ಮನೆ ಕಟ್ಟಿ ಕೊಡಲಾಗುತ್ತಿದೆ ಎಂದು ನುಡಿದರು.


ಕಾರ್ಯಕ್ರಮದಲ್ಲಿ ವಸತಿ ಸಮುಚ್ಚಯದ ವಿನ್ಯಾಸವನ್ನು ಶಾಸಕರು ಹಾಗೂ ಗಣ್ಯರು ಬಿಡುಗಡೆಗೊಳಿಸಿದರು.
ಕಾಮಗಾರಿಗೂ ಮುನ್ನ ಹಿಂದೂ ಸಂಪ್ರದಾಯದಂತೆ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ನಯನಕೋಟಿಯ ಶಕೀಲಾ ಕಾವ, ಕಿಶೋರ್ ಕೊಟ್ಟಾರಿ, ಸರಿತಾ ಶಶಿಧರ್ ಲಕ್ಷ್ಮಿ ಶೇಖರ್ ದೇವಾಡಿಗ, ಶೋಭಾ ರಾಜೇಶ್, ವೇದಾವತಿ, ವರುಣ್ ಚೌಟ, ಶ್ವೇತಾ ಪೂಜಾರಿ, ಪ್ರಶಾಂತ ಮುಡಾಯಿಕೋಡಿ, ರಂಜಿನಿ ಕೋಟ್ಯಾನ್,ಮನೋಜ್ ಕುಮಾರ್ ಹಾಗೂ ಮಹಾ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು
ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಗುತ್ತಿಗೆದಾರರು ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!