ಸುರತ್ಕಲ್: ತೀವ್ರ ಕುತೂಹಲ ಕೆರಳಿಸಿದ್ದ ಕೈಕಂಬ ಸಮೀಪದ ಮಳಲಿಪೇಟೆ ಮಸೀದಿ ಪ್ರಕರಣ ಸಂಬಂಧ ತೀರ್ಪು ಕಾಯ್ದಿರಿಸಿದ್ದ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಇಂದು ತೀರ್ಪು ನೀಡಿದೆ. ಮಳಲಿ ಮಸೀದಿ ಜಾಗದಲ್ಲಿ ಕೋರ್ಟ್ ಕಮಿಷನರ್ ಮೂಲಕ ಸರ್ವೆ ನಡೆಸಲು ಆದೇಶ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಸಲ್ಲಿಸಿತ್ತು. ಇಂದು ಸಿವಿಲ್ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ ಮಾಡಿದ್ದಲ್ಲದೆ ವಿಹಿಂಪ ಅರ್ಜಿಯನ್ನು ಸ್ವೀಕರಿಸಿದೆ.