ಮಂಗಳೂರು: ಮಂಗಳೂರು ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಮಾನ ನಿಲ್ದಾಣದಿಂದ ಎ.ಜೆ. ಆಸ್ಪತ್ರೆಗೆ ತೆರಳಿ ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಅರೋಗ್ಯ ವಿಚಾರಿಸಿದರು.
ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರನ್ನು ಭೇಟಿಯಾದ ಸಿಎಂ ಕೆಲಹೊತ್ತು ಮಾತುಕತೆ ನಡೆಸಿದರು. ಬಳಿಕ ಬಾವುಟಗುಡ್ಡೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳಿದರು.