ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ! ಭಯೋತ್ಪಾದಕ ಕೃತ್ಯ, ಭಾರೀ ಹಾನಿಯುಂಟು ಮಾಡುವ ಸಂಚು- ಡಿಜಿಪಿ

 

ಮಂಗಳೂರು: ನಿನ್ನೆ ಸಂಜೆ ನಗರದ ಹೊರವಲಯದ ನಾಗುರಿ ಬಳಿ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿ ಇಂದು ಮುಂಜಾನೆ ಟ್ವೀಟ್ ಮಾಡಿರುವ ಡಿಜಿಪಿ ಅವರು, “ಭಯೋತ್ಪಾದನ ದಾಳಿಯ ಸಂಚು ದೃಢಪಟ್ಟಿದೆ. ಸ್ಫೋಟವು ಆಕಸ್ಮಿಕವಲ್ಲ, ಗಂಭೀರ ಹಾನಿಯನ್ನುಂಟುಮಾಡುವ ಉದ್ದೇಶದಿಂದ ನಡೆಸಿದ ಕೃತ್ಯವಾಗಿದೆ. ಕರ್ನಾಟಕ ರಾಜ್ಯ ಪೊಲೀಸರು ಕೇಂದ್ರ ಏಜೆನ್ಸಿಗಳೊಂದಿಗೆ ಇದರ ಬಗ್ಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.
ಆಟೋದಲ್ಲಿ ಕುಕ್ಕರ್ ಬಾಂಬ್ ಪತ್ತೆಯಾಗಿದೆ. ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು​ ಬೋಲ್ಟ್​​, ಸರ್ಕ್ಯೂಟ್​​ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ. ಸಿಕ್ಕ ವಸ್ತುಗಳನ್ನು ವಿಧಿ ವಿಜ್ಞಾನ ತಂಡ ಪರೀಕ್ಷೆಗೊಳಪಡಿಸಿದೆ.

error: Content is protected !!