ಮೂಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಇದರ ನಾಮಫಲಕ ಅನಾವರಣ ಕಾರ್ಯಕ್ರಮ ಗುರುವಾರ ಬೆಳಗ್ಗೆ ಮೂಲ್ಕಿ ಹೆದ್ದಾರಿ ಬಳಿಯ ಪಡುಬೈಲ್ ಕ್ರಾಸ್ ಸಮೀಪ ನಿವೇಶನದಲ್ಲಿ ಜರುಗಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಕನ್ಯಾನ ಸದಾಶಿವ ಶೆಟ್ಟಿ ಅವರು, “ಸತ್ಕಾರ್ಯಗಳಿಗೆ ದೇವರ ಆಶೀರ್ವಾದ ಖಂಡಿತ ಇರುತ್ತದೆ. ಜಾಗತಿಕ ಬಂಟರ ಸಂಘ ನಿರ್ಮಿಸಲು ಉದ್ದೇಶಿಸಿರುವ ಈ ಸಂಕೀರ್ಣವನ್ನು ಸಮಾಜ ಸದುಪಯೋಗಪಡಿಸಿಕೊಂಡಲ್ಲಿ ನಮ್ಮೆಲ್ಲರ ಶ್ರಮ ಸಾರ್ಥಕ. ಇಂತಹ ಸಮಾಜಮುಖಿ ಕೆಲಸ ಇನ್ನಷ್ಟು ನಡೆಯಲಿ” ಎಂದು ಶುಭ ಹಾರೈಸಿದರು.
ಕೂಳೂರು ಕನ್ಯಾನ ಸದಾಶಿವ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ರೈ, ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಶ್ರೀ ಕ್ಷೇತ್ರ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ್ ಶೆಟ್ಟಿ, ಎಳತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ, ಎಸ್ ಸಿಡಿಸಿಸಿ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುಭಾಷ್ ಶೆಟ್ಟಿ, ನಾಗೇಶ್ ಶೆಟ್ಟಿ, ಚಂದ್ರಹಾಸ್ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಶಶಿಧರ್ ಶೆಟ್ಟಿ, ಯೋಗೀಶ್ ಕೋಟ್ಯಾನ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಪ್ರವೀಣ್ ಶೆಟ್ಟಿ, ಮುಂಡ್ಕೂರು ಮೋಹನ್ ಶೆಟ್ಟಿ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಇಂಜಿನಿಯರ್ ಜೀವನ್ ಶೆಟ್ಟಿ, ಮೂಲ್ಕಿ ನಗರ ಪಂಚಾಯತ್ ಉಪಾಧ್ಯಕ್ಷ ಸತೀಶ್ ಅಂಚನ್ ಉಪಸ್ಥಿತರಿದ್ದರು.