ಯಕ್ಷರಂಗದ ಮೇರು ಕಲಾವಿದ ಕುಂಬ್ಳೆ ಸುಂದರ್ ರಾವ್ ಇನ್ನಿಲ್ಲ

ಮಂಗಳೂರು: ಯಕ್ಷಗಾನ ರಂಗದಲ್ಲಿ ಹಿರಿಯ ಕಲಾವಿದರಾಗಿ ಗುರುತಿಸಿಕೊಂಡಿದ್ದ ಕುಂಬ್ಳೆ ಸುಂದರ ರಾವ್ ಅವರು ಇಂದು ಮುಂಜಾನೆ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅವರ ಅಂತ್ಯ ಸಂಸ್ಕಾರ ನಾಳೆ ನೆರವೇರಲಿದೆ. ಸಾರ್ವಜನಿಕರ ವೀಕ್ಷಣೆಗೆ ಮಂಗಳೂರು ಪಂಪ್ವೆಲ್ ಬಳಿ ಇರುವ ಅವರ ಮನೆಯಲ್ಲಿ ಅವಕಾಶವಿದೆ. ಯಕ್ಷಗಾನ ಕಲಾರಂಗ ಅವರ ಅಗಲಿಕೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದೆ.

error: Content is protected !!