ಸುರತ್ಕಲ್ ಟೋಲ್ ಗೇಟ್ ರದ್ದು! ಮಧ್ಯರಾತ್ರಿ ಹೋರಾಟಗಾರರ ಸಂಭ್ರಮ!!

ಸುರತ್ಕಲ್: ಅನಧಿಕೃತ ಎನ್ ಐ ಟಿಕೆ ಟೋಲ್ ಗೇಟ್ ಕೊನೆಗೂ ಹೆಜಮಾಡಿ ಟೋಲ್ ಜೊತೆಗೆ ವಿಲೀನಗೊಂಡು ನಿನ್ನೆ ಮಧ್ಯರಾತ್ರಿಯಿಂದ ಸುಂಕ ಪಡೆಯದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು ಕಳೆದ 36 ದಿನಗಳಿಂದ ಸ್ಥಳದಲ್ಲಿ ಧರಣಿ ಕೂತಿದ್ದ ಹೋರಾಟಗಾರರು ಮಧ್ಯರಾತ್ರಿ ಕೇಕ್ ಕತ್ತರಿಸಿ ಸಿಹಿ ಹಂಚಿ ಘೋಷಣೆ ಕೂಗಿ ಸಂಭ್ರಮಿಸಿದರು. ಇದೇ ವೇಳೆ ಹೋರಾಟದ ಮುಂದಾಳತ್ವ ವಹಿಸಿದ್ದ ಮುನೀರ್ ಕಾಟಿಪಳ್ಳರನ್ನು ಶಾಲು ಹೊದೆಸಿ ಅಭಿನಂದಿಸಲಾಯಿತು.


ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿ ಆಶ್ರಯದಲ್ಲಿ ಕಳೆದ ಆರು ವರ್ಷಗಳಿಂದ ಟೋಲ್ ವಿರುದ್ಧ ಹೋರಾಟ ನಡೆಯುತ್ತಿದೆ. ಕಳೆದ 36 ದಿನಗಳಿಂದ ಅಹೋರಾತ್ರಿ ಹೋರಾಟ ನಡೆಯುತ್ತಿದ್ದು ಸಾವಿರಾರು ಮಂದಿ ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

ಈ ವೇಳೆ ಹೋರಾಟದ ನೇತೃತ್ವ ವಹಿಸಿದ್ದ ಮುನೀರ್ ಕಾಟಿಪಳ್ಳ, ಬಿಕೆ ಇಮ್ತಿಯಾಜ್, ಮಾಜಿ ಶಾಸಕ ಮೊಯಿದೀನ್ ಬಾವಾ, ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ, ಧರ್ಮಾನಂದ ಶೆಟ್ಟಿಗಾರ್, ಬಜ್ಪೆ ಪಂಚಾಯತ್ ಮಾಜಿ ಅಧ್ಯಕ್ಷ ಶಾಹುಲ್ ಹಮೀದ್, ಮಾಜಿ ಮೇಯರ್ ಅಶ್ರಫ್, ಸಾಲೆ ಮುಹಮ್ಮದ್, ದಯಾನಂದ ಶೆಟ್ಟಿ, ರಾಜೇಶ್ ಕುಳಾಯಿ, ಮುಹಮ್ಮದ್ ಸಮೀರ್ ಕಾಟಿಪಳ್ಳ, ಅಯಾಜ್, ರಾಘವೇಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!