ಸುರತ್ಕಲ್: “ನಮ್ಮ ಕ್ಲಿನಿಕ್” ಯೋಜನೆಯಡಿಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಪಚ್ಚನಾಡಿ, ಕುಂಜತ್ತಬೈಲ್ ಮತ್ತು ಮೀನಕಳಿಯದಲ್ಲಿ ನಾಳೆ ಕ್ಲಿನಿಕ್ ಶುಭಾರಂಭಗೊಳ್ಳಲಿದೆ” ಎಂದು ಉತ್ತರ ಕ್ಷೇತ್ರದ ಶಾಸಕ ಭರತ್ ವೈ. ಶೆಟ್ಟಿ ಹೇಳಿದರು.
ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲದೆ ಇರುವ ಮತ್ತು ದೂರವಿರುವ ಪ್ರದೇಶದಲ್ಲಿ ಸರಕಾರ ಜನರ ಅನುಕೂಲತೆಗಾಗಿ ನಮ್ಮ ಕ್ಲಿನಿಕ್ ಆರಂಭಿಸುತ್ತಿದ್ದು ಮೂರು ಕಡೆಗಳಲ್ಲಿ ಪ್ರಾರಂಭಗೊಳ್ಳಲಿದೆ ಎಂದು ಶಾಸಕರು ಮಾಹಿತಿ ನೀಡಿದರು.
ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಆನ್ ಲೈನ್ ಮೂಲಕ ಉದ್ಘಾಟನೆ ನೆರವೇರಿಸಲಿದ್ದಾರೆ. ಕ್ಲಿನಿಕ್ ಕಾಮಗಾರಿ ಪೂರ್ಣಗೊಂಡಿದ್ದು ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದರು.