ಕಟೀಲು: ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದ ಹಿರಿಯ ಕಲಾವಿದ ಗುರುವಪ್ಪ ಬಾಯಾರು (58) ನಿನ್ನೆ ತಡರಾತ್ರಿ 12 ಗಂಟೆಯ ಸುಮಾರಿಗೆ ಕಟೀಲಿನ ಸರಸ್ವತಿ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನ ವೇಳೆ ಕುಸಿದುಬಿದ್ದು ನಿಧನರಾಗಿದ್ದಾರೆ.
ಗುರುವಪ್ಪರು ಕಟೀಲು ನಾಲ್ಕನೇ ಮೇಳದ
ಕಲಾವಿದರಾಗಿದ್ದರು. ನಿನ್ನೆ ರಾತ್ರಿ ಸರಸ್ವತಿ ಸದನದಲ್ಲಿ ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಬಯಲಾಟ ನಡೆಯುತ್ತಿತ್ತು. ಅವರು ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗ ಪ್ರದರ್ಶನವಾಗುತ್ತಿತ್ತು. ಈ ಸಂದರ್ಭದಲ್ಲಿ ರಂಗಸ್ಥಳದಲ್ಲಿ
ನಿಂತಿದ್ದ ಬಾಯಾರು ಅವರು ರಂಗಸ್ಥಳದಿಂದ ಕೆಳಗಡೆ ಬಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ವೈದ್ಯರು ಸಾವನ್ನಪ್ಪಿದ್ದಾಗಿ ಘೋಸಿಸಿದರು.