“ಬಾಲ್ಯದಲ್ಲಿ ಮನೆಯ ಒಳಗೂ ಹೊರಗೂ ಮಳೆ ಸುರಿಯುತ್ತಿತ್ತು, ಚಂದ್ರನನ್ನು ಮನೆಯೊಳಗಡೆ ಕಂಡಿದ್ದೇನೆ” ಬಾಲ್ಯವನ್ನು ನೆನೆದು ಗದ್ಗದಿತರಾದ ಕೆ. ಪ್ರಕಾಶ್ ಶೆಟ್ಟಿ

ಬಂಗ್ರ ಕುಳೂರಿನಲ್ಲಿ “ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ” ಪ್ರದಾನ ಕಾರ್ಯಕ್ರಮ

ಸುರತ್ಕಲ್: “ಬಾಲ್ಯದಲ್ಲಿ ನನ್ನ ಮನೆಯ ಒಳಗೂ ಹೊರಗೂ ಮಳೆ ಸುರಿಯುತ್ತಿತ್ತು, ಚಂದ್ರನನ್ನು ನಾನು ಮನೆಯ ಒಳಗಡೆಯೇ ಮಲಗಿ ನೋಡಿದ್ದೇನೆ. ಬಡತನ ಕಣ್ಣಾರೆ ಕಂಡವನು ನಾನು. ಸ್ವಾಭಿಮಾನ ಬಿಟ್ಟು ಸಹಾಯ ಪಡೆದುಕೊಳ್ಳಿ ಮುಂದಿನ ದಿನಗಳು ಖಂಡಿತ ಒಳ್ಳೆಯದಾಗುತ್ತದೆ. ನಾನು ದುಡಿಯಲು ಊರು ಬಿಟ್ಟು ಹೋದ ಸಂದರ್ಭದಲ್ಲಿ ಅನೇಕ ಮಂದಿ ನೆರವು ನೀಡಿದ್ದಾರೆ. ಅವರೆಲ್ಲರ ಋಣ ನನ್ನ ಮೇಲಿದೆ. ಆತ್ಮತೃಪ್ತಿಗಾಗಿ ಈ ಯೋಜನೆ ಹಾಕಿಕೊಂಡಿದ್ದೇನೆ. ನಿಮ್ಮೆಲ್ಲರ ಆಶೀರ್ವಾದವೇ ನನಗೆ ಬಲುದೊಡ್ಡ ಆಸ್ತಿಯಾಗಿದೆ” ಎಂದು ಹೇಳುತ್ತಾ ಎಂಆರ್ ಜಿ ಗ್ರೂಪ್ ಚೇರ್ ಮೆನ್ ಕೆ. ಪ್ರಕಾಶ್ ಶೆಟ್ಟಿ ಗದ್ಗದಿತರಾದರು. ಅವರು ಬಂಗ್ರ ಕುಳೂರಿನಲ್ಲಿ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತಾಡುತ್ತಿದ್ದರು.
1250 ಕುಟುಂಬಗಳಿಗೆ 3 ಕೋಟಿ ರೂ. ಮೊತ್ತದ ಸಹಾಯಹಸ್ತ ವಿತರಣೆ ಮಾಡಲಾಯಿತು. ಸಾಂಕೇತಿಕವಾಗಿ 7 ಮಂದಿಗೆ ವೇದಿಕೆಯಲ್ಲಿ ಸಹಾಯ ಹಸ್ತ ವಿತರಿಸಲಾಯಿತು.
ವೇದಿಕೆಯಲ್ಲಿ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ, ಗುರ್ಮೆ ಫೌಂಡೇಶನ್ ನ ಗುರ್ಮೆ ಸುರೇಶ್ ಶೆಟ್ಟಿ, ಎಂ ಆರ್ ಜಿ ಗ್ರೂಪ್ ಚೇರ್ ಮೆನ್ ಕೆ. ಪ್ರಕಾಶ್ ಶೆಟ್ಟಿ, ಆಶಾ ಪ್ರಕಾಶ್ ಶೆಟ್ಟಿ, ಆಡಳಿತ ನಿರ್ದೇಶಕ ಗೌರವ್ ಪಿ. ಶೆಟ್ಟಿ ಉಪಸ್ಥಿತರಿದ್ದರು.

error: Content is protected !!