ಸುರತ್ಕಲ್: ಕೃಷ್ಣಾಪುರ ನಿವಾಸಿ ಜಲೀಲ್ ಕೊಲೆ ಪ್ರಕರಣದ ಬಗ್ಗೆ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ಈ ಕುರಿತು ಸ್ಥಳೀಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿದ್ದು ಶೀಘ್ರದಲ್ಲಿ ಆರೋಪಿಗಳ ಬಂಧನವಾಗುವ ವಿಶ್ವಾಸವಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ವೈ. ಭರತ್ ಶೆಟ್ಟಿ ಹೇಳಿದ್ದಾರೆ.
“ಜಲೀಲ್ ಕೊಲೆ ಪ್ರಕರಣ ಕುರಿತಂತೆ ಈಗಾಗಲೇ ಸೂಕ್ತ ಕ್ರಮವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಕಾಂಗ್ರೆಸ್ ನಾಯಕರು ಘಟನೆಯಿಂದ ರಾಜಕೀಯ ಲಾಭ ಪಡೆಯಲು ಯತ್ನಿಸುವುದು ಬೇಡ. ಆರೋಪಿಗಳ ಬಂಧನದ ಬಳಿಕ ಘಟನೆಯ ಹಿನ್ನೆಲೆ ಬೆಳಕಿಗೆ ಬರಲಿದೆ” ಎಂದರು.