ಬೆಳ್ತಂಗಡಿ: ವೇಣೂರು ಸಮೀಪದ ಗರ್ಡಾಡಿ ಎಂಬಲ್ಲಿ ಕಾರ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಹಾಗೂ ಅವರ ಕಾರ್ ಚಾಲಕ ಮುಷರಫ್ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಕಾರ್ ಹಾಗೂ ಬಸ್ ಮುಖಾಮುಖಿ ಢಿಕ್ಕಿ ಹೊಡೆದಿದ್ದು ಇನ್ನೋವಾ ಕಾರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.