ಮುಲ್ಕಿ: ಮುಲ್ಕಿ ಸೀಮೆ ಅರಸು ಕಂಬಳ ಸಮಿತಿ ವತಿಯಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕಂಬಳದ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಬ್ಯಾಂಕ್ ಮ್ಯಾನೇಜಿಂಗ್ ಡೈರೆಕ್ಟರ್ ಎಂ.ಎಸ್. ಮಹಾಬಲೇಶ್ವರ ಭಟ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, “ಕಂಬಳ ತುಳುನಾಡಿನ ಸಾಂಸ್ಕೃತಿಕ ಕ್ರೀಡೆಯಾಗಿದ್ದು ಉಳಿಸಿ ಬೆಳೆಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ” ಎಂದರು.
ವೇದಿಕೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ರೋಹಿತ್ ಹೆಗ್ಡೆ ಯಕ್ಷದ್ರುವ ಪಟ್ಲ ಸತೀಶ್ ಶೆಟ್ಟಿ, ಮಲ್ಲಿಕಾ ಶೆಟ್ಟಿ ಬಳಕುಂಜೆಗುತ್ತು, ಹಿರಿಯ ಪತ್ರಕರ್ತ ಬಿ ಎಂ ಹನೀಫ್, ದಿನೇಶ್ ಶೆಟ್ಟಿ ಕಾಪು, ಅನಿವಾಸಿ ಉದ್ಯಮಿ ಬಿಆರ್ ಶೆಟ್ಟಿ, ಯಶವಂತ ಶೆಟ್ಟಿ ಲೋಲಾಕ್ಷಿ ಶೆಟ್ಟಿ ಕಂಬಳ ಸಮಿತಿಯ ಅಧ್ಯಕ್ಷ ಕಿರಣ್ ಶೆಟ್ಟಿ ಕೋಲ್ನಾಡು ಗುತ್ತು, ಚಂದ್ರಹಾಸ ಶೆಟ್ಟಿ ಮಸ್ಕತ್, ಕೃಷ್ಣ ಹೆಬ್ಬಾರ್ ವಿನೋದ್ ಸಾಲ್ಯಾನ್ ಬೆಳ್ಳಾಯರು, ದಿನೇಶ್ ಸುವರ್ಣ, ಚಂದ್ರಹಾಸ ಪಡು ತೋಟ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ಉದ್ಯಮಿ ಎಂ ರವಿ ಶೆಟ್ಟಿ ಕತಾರ್, ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ನಾಗಸ್ವರ ವಾದಕ ನಾಗೇಶ್ ಬಪ್ಪನಾಡು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರಾಜಕುಮಾರ್ ಬೆಹರಿನ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಐಕಳಬಾವ ದೇವಿ ಪ್ರಸಾದ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಕಂಬಳದಲ್ಲಿ ಸುಮಾರು 150 ಜೋಡಿ ಕೋಣಗಳು ಭಾಗವಹಿಸಿದ್ದವು. ನವೀನ್ ಶೆಟ್ಟಿ ಎಡ್ಮೆಮಾರ್ ಕಾರ್ಯಕ್ರಮ ನಿರೂಪಿಸಿದರು.