ಗುರುಪುರ ನೂತನ ನಾಡಕಚೇರಿ ಕಟ್ಟಡಕ್ಕೆ ಶಾಸಕ ವೈ. ಭರತ್ ಶೆಟ್ಟಿ ಅವರಿಂದ ಗುದ್ದಲಿಪೂಜೆ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುಪುರ ನಾಡಕಚೇರಿ ನೂತನ ಕಟ್ಟಡ ಕಾಮಗಾರಿಗೆ ರೂ.18.84 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಬುಧವಾರ ಗುದ್ದಲಿಪೂಜೆ ನೆರವೇರಿಸಿದರು.
ಬಳಿಕ ಮಾತಾಡಿದ ಅವರು, “ಕಟ್ಟಡ ಗಟ್ಟಿಮುಟ್ಟಾಗಿದ್ದರೆ ಸಾಲದು ಅದರೊಳಗಡೆ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಅಧಿಕಾರಿಗಳು ಇರಬೇಕು. ನಾಡ ಕಚೇರಿಗೆ ಸುಸಜ್ಜಿತ ಕಟ್ಟಡವನ್ನು ನಿರ್ಮಿಸುವ ಮೂಲಕ ಈ ಭಾಗದ ಜನರ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಜನರು ಇದರ ಸದುಪಯೋಗ ಪಡೆದುಕೊಳ್ಳಿ” ಎಂದರು.

ಕೋವಿಡ್ ನಿಂದ ಸಾವನ್ನಪ್ಪಿದ ಯೋಗೀಶ್ ಮಲ್ಲೂರು ಬದ್ರಿಯಾ ನಗರ ಇವರಿಗೆ ಕೋವಿಡ್ ಪರಿಹಾರ ನಿಧಿಯಿಂದ 1 ಲಕ್ಷ ರೂ. ಪರಿಹಾರ ಚೆಕ್ ಅನ್ನು ಶಾಸಕರು ಇದೇ ಸಂದರ್ಭದಲ್ಲಿ ವಿತರಿಸಿದರು.

ವೇದಿಕೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಮಂಗಳೂರು ತಹಸೀಲ್ದಾರ್ ಪ್ರಶಾಂತ್ ಪಾಟೀಲ್, ಗುರುಪುರ ಉಪ ತಹಸೀಲ್ದಾರ್ ಶಿವಪ್ರಸಾದ್, ಕೃಷ್ಣ ಅಮೀನ್, ಕಂದಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಉಮೇಶ್ ಕುಲಾಲ್, ಗುರುಪುರ ಪಂ. ಅಧ್ಯಕ್ಷ ಯಶವಂತ ಶೆಟ್ಟಿ, ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು

error: Content is protected !!