ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಂಜಿಮಠ ಪಂಚಾಯತ್ ವ್ಯಾಪ್ತಿಯಲ್ಲಿ 1.74 ಕೋಟಿ ರೂ. ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಕ್ಷೇತ್ರದ ಶಾಸಕ ವೈ. ಭರತ್ ಶೆಟ್ಟಿ ಅವರು ಚಾಲನೆ ನೀಡಿದರು.
ಬಳಿಕ ಮಾತಾಡಿದ ಅವರು, “ಗಂಜಿಮಠ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಿಗೆ 1.74 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಇನ್ನು ಕೆಲವು ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದ್ದು ಮುಂದಿನ ಒಂದೆರಡು ತಿಂಗಳಲ್ಲಿ ಪೂರ್ಣಗೊಳ್ಳುವ ವಿಶ್ವಾಸವಿದೆ. ಪೊಳಲಿ ಮುಖ್ಯರಸ್ತೆಯ ಕಾಮಗಾರಿ ವೇಗ ಪಡೆದುಕೊಂಡಿದ್ದು ಆದಷ್ಟು ಶೀಘ್ರವಾಗಿ ಲೋಕಾರ್ಪಣೆಗೊಳ್ಳಲಿದೆ. ಜನರು ಕಾಮಗಾರಿ ನಡೆಯುವ ಸಂದರ್ಭದಲ್ಲಿ ನಮ್ಮೊಂದಿಗೆ ಸಹಕರಿಸಿದಲ್ಲಿ ಕ್ಲಪ್ತ ಸಮಯದಲ್ಲಿ ಜನರ ಬಳಕೆಗೆ ಲಭಿಸಲಿದೆ” ಎಂದರು.
ಗುರುಪುರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸೋಹನ್ ಅತಿಕಾರಿ, ಉದ್ಯಮಿ ಚಂದ್ರಹಾಸ ನಾರಳ, ಗಂಜಿಮಠ ಪಂಚಾಯತ್ ಅಧ್ಯಕ್ಷ ನೋಣಯ್ಯ ಕೋಟ್ಯಾನ್, ಗಂಜಿಪಠ ಪಂಚಾಯತ್ ಸದಸ್ಯರಾದ ಪ್ರವೀಣ್ ಶೆಟ್ಟಿ, ತಮ್ಮಯ್ಯ ಪೂಜಾರಿ, ಕುಮುದಾ, ಲೋಲಾಕ್ಷಿ, ವಜ್ರಾಕ್ಷ, ಮಾಜಿ ಪಂಚಾಯತ್ ಸದಸ್ಯರಾದ ಮಾಧವ ಮತ್ತಿತರು ಉಪಸ್ಥಿತರಿದ್ದರು.