ಸುರತ್ಕಲ್: ಇಲ್ಲಿಗೆ ಸಮೀಪದ ಬಾಂಗ್ಲಾ ಕಾಲನಿ ಎಂಬಲ್ಲಿ ಮನೆಯೊಂದರ ಫ್ರಿಡ್ಜ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಮನೆ ಸುಟ್ಟು ಭಸ್ಮವಾದ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ.
ಉಮೇಶ್ ಆಚಾರ್ಯ ಎಂಬವರ ಮನೆ ಬೆಂಕಿ ಅನಾಹುತಕ್ಕೆ ತುತ್ತಾಗಿದ್ದು ಘಟನೆ ನಡೆಯುವ ಸಂದರ್ಭದಲ್ಲಿ ಯಾರೂ ಇಲ್ಲದಿದ್ದರಿಂದ ಸಂಭಾವ್ಯ ಅನಾಹುತ ತಪ್ಪಿದಂತಾಗಿದೆ. ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಚಿನ್ನಾಭರಣ, ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಸ್ಥಳಕ್ಕೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ವೈ, ಮೇಯರ್ ಜಯಾನಂದ ಅಂಚನ್, ಮನಪಾ ಸದಸ್ಯ ವರುಣ್ ಚೌಟ, ಸಾಮಾಜಿಕ ಕಾರ್ಯಕರ್ತ ಉಮೇಶ್ ದೇವಾಡಿಗ ಇಡ್ಯ ಭೇಟಿ ಕೊಟ್ಟಿದ್ದಾರೆ.