ಕಿನ್ನಿಗೋಳಿ: ಉಪನ್ಯಾಸಕಿ ನೇಣಿಗೆ ಶರಣು!

ಸುರತ್ಕಲ್: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ಎಸ್.ಕೋಡಿ ಎಂಬಲ್ಲಿ ಕಾಲೇಜ್ ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಅಮಿತಾ ಬಿ.ವಿ.(34) ಆತ್ಮಹತ್ಯೆ
ಮಾಡಿಕೊಂಡ ದುರ್ದೈವಿ.
ಅಮಿತಾ ಅವರಿಗೆ ವಿವಾಹವಾಗಿ 12 ವರ್ಷಗಳಾಗಿದ್ದು ತಾಯಿಮನೆಯಿಂದ ಬಂದು ಮನೆಯಲ್ಲಿ ಯಾರೂ ಇಲ್ಲದ
ವೇಳೆಯಲ್ಲಿ ತಮ್ಮ ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಮಿತಾಗೆ ಓರ್ವ ಮಗಳಿದ್ದು ಸಾವಿಗೆ ಕಾರಣ ತಿಳಿದು ಬಂದಿಲ್ಲ. ಅಮಿತಾ ವಾಮದಪದವು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದರು.

error: Content is protected !!