ಸುರತ್ಕಲ್: “ಜನರು ಬಿಜೆಪಿ ಸರಕಾರದ ಆಡಳಿತದಲ್ಲಿ ಯಾವ ವಿಶ್ವಾಸವನ್ನೂ ಉಳಿಸಿಕೊಂಡಿಲ್ಲ. ಅವರಿಗೆ ಭರವಸೆ ಏನಾದರೂ ಇದ್ದರೆ ಅದು ಕಾಂಗ್ರೆಸ್ ಆಡಳಿತದ ಮೇಲೆ ಮಾತ್ರ. ಈಗಾಗಲೇ ಜನಸಾಮಾನ್ಯರಿಗಾಗಿ ಮೂರು ಭರವಸೆಯನ್ನು ನೀಡಿರುವ ಪಕ್ಷ ಮುಂದಿನ ದಿನಗಳಲ್ಲಿ ಜನರಿಂದ ಅಧಿಕಾರವನ್ನು ಪಡೆದು ಜನರಿಗಾಗಿ ಇನ್ನಷ್ಟು ಕಲ್ಯಾಣ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ” ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಹೇಳಿದರು.
ಅವರು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಾರ್ ಪದವು ಪರಿಸರದ ವಿವಿಧ ಮನೆಗಳಿಗೆ ಭೇಟಿ ನೀಡಿ ಗ್ರಾಮಸ್ಥರ ಕುಂದು ಕೊರತೆಗಳನ್ನು ಆಲಿಸಿ ಪರಿಹಾರ ಒದಗಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಕೆ.ದಾಮೋದರ್ ಶೆಟ್ಟಿ, ರೊನಾಲ್ಡ್ ಫಾಸ್ಕಲ್ ಸಲ್ಡಾನ, ಅಶ್ರಫ್ ಅಡ್ಯಾರ್ ಹಾಗೂ ಗುರುಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಮುಫೀದ್ ಮತ್ತಿತರರು ಉಪಸ್ಥಿತರಿದ್ದರು.