ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮುಂದಿನ ಮೇ 10 ರಿಂದ 23ರವರೆಗೆ ಪುನಃ ಪ್ರತಿಷ್ಠೆ , ಅಷ್ಟಬಂಧ ಬ್ರಹ್ಮ ಕುಂಭಾಭಿಷೇಕ, ನಾಗಮಂಡಲೋತ್ಸವ ನಡೆಯಲಿದ್ದು ಪೂರ್ವಭಾವಿಯಾಗಿ ಕ್ಷೇತ್ರದಲ್ಲಿ ಚಪ್ಪರಮುಹೂರ್ತ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು
ದೇವಸ್ಥಾನದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ವಿಶೇಷ ಪ್ರಾರ್ಥನೆ ನಡೆಸಿದರು
ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿ ಗ್ರಾಮಸ್ಥರು ಹಾಗೂ ಪರ ಊರ ಭಕ್ತಾದಿಗಳು ಕ್ಷೇತ್ರದ ಬ್ರಹ್ಮಕಲಶೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದರು
ಸೀಮೆ ಅರಸರಾದ ದುಗ್ಗಣ್ಣ ಸಾವಂತರು ಮಾತನಾಡಿ ಸಂಘ ಸಂಸ್ಥೆಗಳು, ಗ್ರಾಮಸ್ಥರು, ದಾನಿಗಳ, ಸ್ವಯಂಸೇವಕರ ಶ್ರಮದಾನದ ಮೂಲಕ ದೇವಸ್ಥಾನದ ಜೀರ್ಣೋದ್ಧಾರ ಭರದಿಂದ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಸಹಕಾರ ಬೇಕು ಎಂದರು.
ಅರ್ಚಕ ಮಧುಸೂದನ ಆಚಾರ್ಯ ,ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಮಾಜೀ ಧಾರ್ಮಿಕ ಪರಿಷತ್ ಸದಸ್ಯ ಸೋಂದಾ ಭಾಸ್ಕರ ಭಟ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ.ಹರಿಕೃಷ್ಣ ಪುನರೂರು, ಉಪಾಧ್ಯಕ್ಷ ಮೋಹನ್ ದಾಸ್, ಗುರುರಾಜ್ ಎಸ್ ಪೂಜಾರಿ ಸದಸ್ಯರಾದ ಸುಗಂಧಿ ಕೊಂಡಾಣ, ಮುಂಬೈ ಸಮಿತಿಯ ಕಾರ್ಯದರ್ಶಿ ರಾಮಣ್ಣ ದೇವಾಡಿಗ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರಿದಾಸ್ ಭಟ್, ಸದಸ್ಯರಾದ ವಿಜಯಕುಮಾರ್ ರೈ, ಎಲ್ ಕೆ ಸಾಲ್ಯಾನ್, ಪುರುಷೋತ್ತಮ ರಾವ್, ಯೋಗೀಶ್ ಕೋಟ್ಯಾನ್, ವಿಪುಲ ಡಿ ಶೆಟ್ಟಿಗಾರ್, ಶಾರದಾ ಬಂಗೇರ, ಸತ್ಯನಾರಾಯಣ ಭಟ್, ಕಿರಣ್ ಶೆಟ್ಟಿ ಕೊಲ್ನಾಡುಗುತ್ತು, ವಿನೋದ್ ಕುಮಾರ್ ಬೊಳ್ಳುರು , ಹೇಮನಾಥ ಅಮೀನ್, ಸಂತೋಷ್ ಕುಮಾರ್, ಬ್ರಹ್ಮಕಲಶೋತ್ಸವ ಸಮಿತಿ ಯ ಪದಾಧಿಕಾರಿಗಳು ಸ್ಥಳೀಯ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.