ಮಂಗಳೂರು ಉತ್ತರಕ್ಕೆ ಇನಾಯತ್ ಅಲಿ ಫಿಕ್ಸ್! ಬೆಂಬಲಿಗರ ಸಭೆ ಕರೆದ ಬಾವಾ!!

ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರನ್ನು ಕಣಕ್ಕೆ ಇಳಿಸಲಿದ್ದು ಇಂದು ಮಧ್ಯಾಹ್ನದ ಬಳಿಕ ಉತ್ತರವೂ ಸೇರಿದಂತೆ ಬಾಕಿ ಉಳಿದಿರುವ 8 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆಯಾಗಲಿದೆ ಎಂದು ಮೂಲಗಳು ಹೇಳಿವೆ.
ನಿನ್ನೆ ಬಾಕಿಯುಳಿದಿದ್ದ 15 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆಯನ್ನು ಮಾಡಲಾಗಿತ್ತು. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮಾಜಿ ಶಾಸಕ ಮೊಯಿದೀನ್ ಬಾವಾ ಹಾಗೂ ಇನಾಯತ್ ಅಲಿ ಮಧ್ಯೆ ಟಿಕೆಟ್ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು ಟಿಕೆಟ್ ಹಂಚಿಕೆ ವಿಳಂಬಕ್ಕೆ ಕಾರಣವಾಗಿತ್ತು.
ಈ ಬೆಳವಣಿಗೆಯ ಬೆನ್ನಿಗೆ ಇಂದು ಸಂಜೆ ಮೊಯಿದೀನ್ ಬಾವಾ ಕೃಷ್ಣಾಪುರ ಪರಿಸರದಲ್ಲಿ ಬೆಂಬಲಿಗರ ಸಭೆ ಏರ್ಪಡಿಸಿದ್ದು ಅಲ್ಲಿ ತಮ್ಮ ನಿಲುವು ಪ್ರಕಟಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ಇನಾಯತ್ ಅಲಿ ತಮ್ಮ ಫೌಂಡೇಶನ್ ಮೂಲಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು ಡಿಕೆ ಶಿವಕುಮಾರ್ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

error: Content is protected !!