ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಶುಕ್ರವಾರ ವಾಮಂಜೂರು, ಗುರುಪುರ, ಬಡಗ ಎಡಪದವು ಪರಿಸರದಲ್ಲಿ ಭರ್ಜರಿ ಮತ ಬೇಟೆ ನಡೆಸಿದರು.
ಈ ವೇಳೆ ಮಾಧ್ಯಮಗಳ ಜೊತೆ ಮಾತಾಡಿದ ಅವರು, “ಕಾಂಗ್ರೆಸ್ ಸರಕಾರ ಈ ಬಾರಿ ರಾಜ್ಯದಲ್ಲಿ ಆಡಳಿತಕ್ಕೆ ಬರುವುದು ನಿಶ್ಚಿತ. ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಮತದಾರರು ನೆನಪಿಟ್ಟುಕೊಂಡಿದ್ದಾರೆ. ಈ ಬಾರಿ ಮತ್ತೊಮ್ಮೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದ್ದು ಜನಪರ ಯೋಜನೆಗಳೇ ನಮ್ಮ ಪ್ರಮುಖ ಧ್ಯೇಯವಾಗಿದೆ. ಬಿಜೆಪಿ ಸರಕಾರದ ಜನವಿರೋಧಿ ನೀತಿಯ ವಿರುದ್ಧ ಜನರು ಆಕ್ರೋಶಗೊಂಡಿದ್ದು ಮನೆ ಮನೆ ಭೇಟಿಯ ವೇಳೆ ಆಕ್ರೋಶ ಹೊರಹಾಕುತ್ತಿದ್ದಾರೆ. ಕಾಂಗ್ರೆಸ್ ಸರಕಾರದ ಗ್ಯಾರಂಟಿ ಅಭಿಯಾನ ಕ್ಷೇತ್ರದ ಪ್ರತೀ ಮನೆಗಳನ್ನು ತಲುಪಿದ್ದು ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೇರ ಸ್ಪರ್ಧೆ ಇರಲಿದೆ” ಎಂದರು.