“ಸಮಾಜದ ಅಂಕುಡೊಂಕು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು” -ದುಗ್ಗಣ್ಣ ಸಾವಂತರು

ಮುಲ್ಕಿ: ಗ್ರಾಮೀಣ ಪ್ರದೇಶದಲ್ಲಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಉತ್ತಮ ಬರಹಗಳ ಮೂಲಕ ಆಡಳಿತದ ಕಣ್ಣು ತೆರೆಸಿ ಉತ್ತಮ ಸಮಾಜ ನಿರ್ಮಿಸಲು ಪತ್ರಕರ್ತರ ಪಾತ್ರ ಮಹತ್ವದ್ದು ಎಂದು ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ಹೇಳಿದರು.
ಅವರು ಅರಮನೆ ವೆಲ್ಫೇರ್ ಟ್ರಸ್ಟ್ ಹಾಗೂ ಮುಲ್ಕಿ ಸೀಮೆಯ ವತಿಯಿಂದ ಪತ್ರಕರ್ತರ ದಿನಾಚರಣೆ ಅಂಗವಾಗಿ ಕಾಪು ಪ್ರೆಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮುಲ್ಕಿಯ ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರ ಹರೀಶ್ ಹೆಜ್ಮಾಡಿ ರವರನ್ನು ಪಡುಪಣಂಬೂರಿನ ಮುಲ್ಕಿ ಅರಮನೆಯಲ್ಲಿ ಗೌರವಿಸಿ ಮಾತನಾಡಿದರು.

ಈ ಸಂದರ್ಭ ಮುಲ್ಕಿ ಸೀಮೆ ಅರಮನೆಯ ಆಶಾಲತಾ, ವಕೀಲ ಚಂದ್ರಶೇಖರ್,ವೆಲ್ಫೇರ್ ಟ್ರಸ್ಟ್ ನ ನಿರ್ದೇಶಕ ಗೌತಮ್ ಜೈನ್, ಪತ್ರಕರ್ತ ಪುನೀತ್ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

error: Content is protected !!