ಮಂಗಳೂರು: ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಇಂದು ಜುಲೈ 4ರಂದು ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. ಮಳೆಯಿಂದಾಗಿ ನದಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ.