ಮಂಗಳೂರು: ಕರಾವಳಿಯಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ಶಾಲಾ- ಕಾಲೇಜುಗಳಿಗೆ ಜುಲೈ 5ರಂದು ರಜೆ ಸಾರಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 5 ರವರೆಗೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.5ರ ಬುಧವಾರ ರಜೆ ಘೋಷಿಸಲಾಗಿದೆ.