ಮಂಗಳೂರು: ಕರಾವಳಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ ಹಾಗೂ ಶಾಲಾ- ಕಾಲೇಜುಗಳಿಗೆ ಜುಲೈ 7ರ ಶುಕ್ರವಾರದಂದು ರಜೆ ಸಾರಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.6 ಶುಕ್ರವಾರ ರಜೆ ಘೋಷಿಸಲಾಗಿದೆ.