ಮುಲ್ಕಿ: ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಶಾಲಾ ಶುಲ್ಕ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮ ಸುರಭಿ ಎಲೆಕ್ಟ್ರಾನಿಕ್ಸ್ ಮುಲ್ಕಿ ಹಾಗೂ ಯುವ ಪಡೆ ವತಿಯಿಂದ ಮುಲ್ಕಿ ಎಲೆಕ್ಟ್ರಾನಿಕ್ಸ್ ಅಂಗಡಿಯ ಎದುರು ಭಾಗದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮುಲ್ಕಿ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ವಿದ್ಯಾಧರ್ ಮಾತನಾಡಿ ಕಷ್ಟದಲ್ಲಿರುವವರಿಗೆ ಹಾಗೂ ಶಿಕ್ಷಣಕ್ಕೆ ಸಹಾಯ ಹಸ್ತ ಸಮಾಜಕ್ಕೆ ದೊಡ್ಡ ಕೊಡುಗೆಯಾಗಿದ್ದು ನಗರವನ್ನು ಮಾದಕ ಮುಕ್ತ ವನ್ನಾಗಿಸಲು ವಿದ್ಯಾರ್ಥಿಗಳ ಹಾಗೂ ಯುವ ಜನಾಂಗ ಆರಕ್ಷಕರ ಜೊತೆ ಕೈಜೋಡಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿ ಜಾನ್ ಕ್ವಾಡ್ರಾಸ್ ವಹಿಸಿದ್ದರು
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್ ಮಾಜೀ ಮುಖ್ಯಾಧಿಕಾರಿ ಡಾ. ಹರೀಶ್ಚಂದ್ರ ಪಿ ಸಾಲ್ಯಾನ್, ಕಾಪು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಹೆಜ್ಮಾಡಿ, ಉನ್ನತಿ ಕೋ ಆಪರೇಟಿವ್ ಸೊಸೈಟಿಯ ಸಿಇಒ ರೋಷನ್ ಫುಟಾಡೋ ಹಾಗೂ ಯುವ ಪಡೆಯ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಶಾಲಾ ಶುಲ್ಕ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು ಹಾಗೂ ಕಾಪು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಆಯ್ಕೆಯಾದ ಹರೀಶ್ ಹೆಜ್ಮಾಡಿ ರವರನ್ನು ಗೌರವಿಸಲಾಯಿತು