ಮಂಗಳೂರು: ಮಂಗಳೂರಿನ ಕರಂಬಾರು ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಇದರ ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲಾಭಿವೃದ್ದಿ ಸಮಿತಿ ಹಾಗೂ ಮುಖ್ಯೋಪಾಧ್ಯಾಯರು ಹಾಗೂ ಸಹಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಶುಕ್ರವಾರ ಶಾಲಾ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕೃಷ್ಣ ಕಲ್ಲೋಡಿ ಉದ್ಘಾಟಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ತುಳು ಲಿಪಿ ಶಿಕ್ಷಕಿ, ಸಾಹಿತಿ ಗೀತಾ ಲಕ್ಷ್ಮೀಶ್ ಮಾತನಾಡಿದರು. ಆಟಿ ಒಂದು ಕಷ್ಟದ ಕಾಲ. ಹಿಂದಿನ ಕಾಲದಲ್ಲಿ ಈ ತಿಂಗಳಲ್ಲಿ ದುಡಿಯುವ ವರ್ಗ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಎಲ್ಲಾ ಧರ್ಮೀಯರು ಆಟಿ ತಿಂಗಳಲ್ಲಿ ವಿಶೇಷ ತಿನಿಸು, ಆಟಿದ ಕಷಾಯ ಕುಡಿಯುತ್ತಾರೆ. ಇದು ಸೌಹಾರ್ದದ ಸಂಕೇತ ಎಂದ ಅವರು ತುಳುನಾಡಿನಲ್ಲಿ ಆಟಿ ತಿಂಗಳ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಿಂಜಿನ್ ಇಂಡಿಯಾದ ಜನರಲ್ ಮ್ಯಾನೇಜರ್ ರೊನಾಲ್ಡ್ ಮಸ್ಕರೇನಸ್, ಶಾಲಾಭಿವೃದ್ದಿ ಸಮಿತಿಯ ಸದಸ್ಯ ಮಾಧವ ಅಮೀನ್, ಬ್ಯಾರಿ ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಸದಸ್ಯ & ಪತ್ರಕರ್ತ ಶಂಶೀರ್ ಬುಡೋಳಿ, ಶ್ರೀ ಕೋಟೆ ಬಬ್ಬುಸ್ವಾಮಿ ದೇವಸ್ಥಾನದ ಅಧ್ಯಕ್ಷ ಜಗನ್ನಾಥ ಸಾಲ್ಯಾನ್, ಯುವ ಉದ್ಯಮಿ ನಂದಕುಮಾರ್ ಶೆಟ್ಟಿ,
ಹಾಜರಿದ್ದು ಮಾತನಾಡಿದರು. ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯದರ್ಶಿಗಳಾದ ನವೀನ್ ಚಂದ್ರ ಸಾಲ್ಯಾನ್ ಮತ್ತು ಲೋಕೇಶ್ ಎಂ.ಬಿ ಹಾಜರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಉಷಾಕಿರಣ ಸ್ವಾಗತಿಸಿದರು. ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ರಾಕೇಶ್ ಕುಂದರ್ ವಂದಿಸಿದರು. ಪುರುಷೋತ್ತಮ್ ಗೋಳಿಪಲ್ಕೆ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಬಳಿಕ ಆಟಿ ತಿಂಗಳಲ್ಲಿ ಮಾಡುವ ವಿಶೇಷ ತಿನಿಸುಗಳ ಸಹಭೋಜನ ನಡೆಯಿತು.
ಇದೇ ಸಂದರ್ಭದಲ್ಲಿ ನವಶಕ್ತಿ ಶಾರದೋತ್ಸವ ಸ್ವಾಗತ ಸಮಿತಿ ಮರವೂರು ಇದರ ವತಿಯಿಂದ ಶಾಲಾ ನೂತನ ಕಟ್ಟಡದ ದೇಣಿಗೆಯಾಗಿ ರೂಪಾಯಿ 1,65,000 ಚೆಕ್ಕನ್ನು ಹಸ್ತಾಂತರಿಸಲಾಯಿತು.