ಮುಲ್ಕಿ: ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಯೋಜನೆಯಾದ ಇಂದ್ರಧನುಷ್ 5.0 ಅಭಿಯಾನ ಪಡುಪಣಂಬೂರು ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಮಂಗಳವಾರ ಬೆಳಿಗ್ಗೆ ನಡೆಯಿತು
ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಮಳೆಗಾಲದಲ್ಲಿ ಮಾರಕ ರೋಗಗಳ ಬಗ್ಗೆ ಎಚ್ಚರಿಕೆ ವಹಿಸಿ ಸ್ವಚ್ಛತೆ ಕಾಪಾಡುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ಕುಸುಮಾ ಚಂದ್ರಶೇಖರ್, ಮಾಜೀ ಅಧ್ಯಕ್ಷರಾದ ವಿನೋದ್ ಸಾಲ್ಯಾನ್ , ಮೋಹನ ದಾಸ್, ಸದಸ್ಯರಾದ ಹೇಮನಾಥ್, ಹರಿಪ್ರಸಾದ್, ದಿನೇಶ್ ಹೊಸಲಕ್ಕೆ ಸಮುದಾಯ ಆರೋಗ್ಯ ಅಧಿಕಾರಿ ಕೋಮಲ್ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಮಾರ್ಗರೇಟ್ ಸುದರ್ಶಿನಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪಡಪಣಂಬೂರು ಗ್ರಾಮ ಪಂಚಾಯತಿ ವತಿಯಿಂದ ನಿಧಿ 1ರ ಶೇಕಡ 25 ಅನುದಾನದ ಅಡಿ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ 148 ಫಲಾನುಭವಿಗಳಿಗೆ ಚಯರ್ ವಿತರಣಾ ಸಮಾರಂಭ ಪಂಚಾಯಿತಿಯಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಪಂಚಾಯತಿಯಲ್ಲಿ ಅಭಿವೃದ್ಧಿ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು ಸರಕಾರದ ಸೌಲಭ್ಯಗಳನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳಿ ಎಂದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷೆ ಕುಸುಮ, ಮಾಜೀ ಅಧ್ಯಕ್ಷರಾದ ವಿನೋದ್ ಸಾಲ್ಯಾನ್, ಮೋಹನ್ ದಾಸ್, ಸದಸ್ಯರಾದ ಹೇಮನಾಥ, ಹರಿಪ್ರಸಾದ್, ದಿನೇಶ್ ಹೊಸಲಕ್ಕೆ, ಪಂಚಾಯತ್ ಪಿಡಿಒ ಹಾಗೂ ಕಾರ್ಯದರ್ಶಿ ಮತ್ತಿತರರು ಉಪಸ್ಥಿತರಿದ್ದರು.