ಮುಲ್ಕಿ: ಸ್ಯಾಂಡಲ್ ವುಡ್ ನಟ ಚಿನ್ನಾರಿ ಮುತ್ತ ಖ್ಯಾತಿಯ ವಿಜಯ ರಾಘವೇಂದ್ರ ರವರ ಪತ್ನಿ ಸ್ಪಂದನ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರು ಮಾಧ್ಯಮದ ಜೊತೆ ಮಾತನಾಡಿ ತಮ್ಮ ಆತ್ಮೀಯರಾಗಿದ್ದ ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯವರಾದ ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಮ್ ರವರ ಪುತ್ರಿ ಹಾಗೂ ನಟ ವಿಜಯರಾಘವೇಂದ್ರ ರವರ ಪತ್ನಿ ಸ್ಪಂದನ ರವರು ಉತ್ತಮ ನಟಿಯಾಗಿ ಹಾಗೂ ಇತರೆ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮಾದರಿಯಾಗಿದ್ದರು.
ಅವಿಭಾಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕರಾವಳಿ ಭಾಗದ ಆಚಾರ ವಿಚಾರ ಸಿಹಿ ತಿಂಡಿಗಳು ಅವರಿಗೆ ಅಚ್ಚುಮೆಚ್ಚಿನದ್ದಾಗಿದ್ದು
ಮಂಗಳೂರಿಗೆ ಬಂದಾಗ ಪಬ್ಬಾಸ್ ಐಸ್ ಕ್ರೀಮ್ ಅಂದ್ರೆ ಬಹಳ ಇಷ್ಟ ವಾಗಿದ್ದು ಈಗಲೂ ಮಂಗಳೂರಿನಿಂದ ಬೆಂಗಳೂರಿಗೆ ತರಿಸಿಕೊಳ್ಳುತ್ತಿದ್ದರು. ಅವರ ಕುಟುಂಬಕ್ಕೆ ದೇವರು ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಸ್ಪಂದನಾ ರವರ ನಿಧನಕ್ಕೆ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯಚಂದ್ರ ಜೈನ್,,ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಉದ್ಯಮಿ ಅರವಿಂದ ಪೂಂಜ ಕಾರ್ನಾಡ್,
ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಪುನೀತ್ ಕೃಷ್ಣ, ಗುರುಪ್ರಸಾದ್ ಭಟ್ ಮುಂಡ್ಕೂರು, ಡಾ. ಹರೀಶ್ಚಂದ್ರ ಪಿ ಸಾಲ್ಯಾನ್, ಗೌತಮ್ ಜೈನ್ ಮುಲ್ಕಿ ಅರಮನೆ, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ವೆಂಕಟೇಶ ಹೆಬ್ಬಾರ್, ಉದಯಕುಮಾರ್ ಶೆಟ್ಟಿ ಆದಿಧನ್, ಕಿಶೋರ್ ಶೆಟ್ಟಿ ಬಪ್ಪನಾಡು, ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.