ಇನಾಯತ್ ಅಲಿ ಮಾಸ್ಟರ್ ಸ್ಟ್ರೋಕ್! ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಹುದೊಡ್ಡ 30 ಸದಸ್ಯ ಬಲದ ಗಂಜಿಮಠ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ!!

ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಾಲತಿ ಹಾಗೂ ಉಪಾಧ್ಯಕ್ಷೆಯಾಗಿ ಸಾರಮ್ಮ ಆಯ್ಕೆ.

ಗಂಜಿಮಠ: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪ್ರತಿಷ್ಠಿತ ಗಂಜೀಮಠ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.
ಒಟ್ಟು 30 ಸದಸ್ಯ ಬಲದ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಪಕ್ಷದ-7, ಬಿಜೆಪಿ-18, ಜೆಡಿಎಸ್-2 ಹಾಗೂ ಪಕ್ಷೇತರ-3 ಸದಸ್ಯರಿದ್ದರು.


ನಾಟಕೀಯ ಬೆಳವಣಿಗೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಾಲತಿ ಅವರು 14 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ರೇಖಾ ಅವರಿಗೆ 13 ಮತಗಳು ಹಾಗೂ ಉಳಿದಂತೆ ಮೂರು ಮತಗಳು ನೋಟಾಗೆ ಬಿದ್ದಿದೆ.
ಕ್ರಮವಾಗಿ ಉಪಾಧ್ಯಕ್ಷೆ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಾರಮ್ಮ ಅವರಿಗೆ 14 ಮತಗಳು ಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ಲೋಲಾಕ್ಷಿ ಅವರಿಗೆ 13 ಮತಗಳು ಹಾಗೂ ಮೂರು ಮತಗಳು ನೋಟಾಗೆ ಬಿದ್ದಿರುತ್ತದೆ.

ಮತ್ತೊಮ್ಮೆ ಅಧಿಕಾರದ ಕನಸು ಕಾಣುತ್ತಿದ್ದ ಬಿಜೆಪಿ ಪಕ್ಷಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ನೀಡಿದ ಮಾಸ್ಟರ್ ಸ್ಟ್ರೋಕ್ ಗೆ ತನ್ನ ಲೆಕ್ಕಾಚಾರಗಳು ತಲೆಕೆಳಗಾಗಿದ್ದು. ಬಿಜೆಪಿಯ ಐದು ಸದಸ್ಯರು ಅಡ್ಡ ಮತದಾನ ಹಾಕುವ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಿದ್ದಾರೆ. ಇಬ್ಬರು ಜೆಡಿಎಸ್ ಬೆಂಬಲಿತ ಸದಸ್ಯರ ಮತಗಳು ಕೂಡ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿದ್ದಿದ್ದು, ಇದರಲ್ಲಿ ಇನಾಯತ್ ಅಲಿ ಅವರು ಮುಖ್ಯ ಪಾತ್ರವಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಶೀಘ್ರದಲ್ಲೇ ಹಲವು ಬಿಜೆಪಿ ಬೆಂಬಲಿತ ಸದಸ್ಯರು ಇನಾಯತ್ ಅಲಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಮಾಹಿತಿ ಇದೆ.

error: Content is protected !!