ಮೂಲ್ಕಿ: ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸೌಜನ್ಯಳ ಪ್ರಕರಣದಲ್ಲಿ ನಿಜವಾದ ಆರೋಪಿಗಳ ಬಂಧನವಾಗಿಲ್ಲ ಎಂದು ನ್ಯಾಯಕ್ಕಾಗಿ ಒತ್ತಾಯಿಸಿ ಸೌಜನ್ಯ ಹೋರಾಟ ಸಮಿತಿ ಮೂಲ್ಕಿ ತಾಲೂಕು ವತಿಯಿಂದ ಬೃಹತ್ ಪ್ರತಿಭಟನೆ ಗುರುವಾರ ಸಂಜೆ ಮೂಲ್ಕಿ ಬಸ್ ನಿಲ್ದಾಣದಲ್ಲಿ ನಡೆಯಿತು.
ಕಾರ್ಯಕ್ರಮದ ಆರಂಭದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಸಹಿತ ಇತರರು ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ವೇದಿಕೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಕುಸುಮಾವತಿ, ನಗರ ಪಂಚಾಯತ್ ಅಧ್ಯಕ್ಷ ಶುಭಾಷ್ ಶೆಟ್ಟಿ, ಮೂಲ್ಕಿ ಮಸೀದಿ ಧರ್ಮಗುರು ಮತ್ತಿತರರು ಉಪಸ್ಥಿತರಿದ್ದರು.