ಮೂಲ್ಕಿ: ಇಲ್ಲಿಗೆ ಸಮೀಪದ ಕಾರ್ನಾಡ್ ಬೈಪಾಸ್ ಬಳಿ ಕಾರೊಂದು ಅತಿವೇಗದ ಕಾರಣಕ್ಕೆ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿಯ ಕಲ್ಲಿಗೆ ಡಿಕ್ಕಿ ಹೊಡೆದು ಗದ್ದೆಗೆ ಪಲ್ಟಿಯಾದ ಘಟನೆ ಆದಿತ್ಯವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಕಾರಲ್ಲಿದ್ದವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಮೂಲ್ಕಿ ಠಾಣಾ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.