ಉಡುಪಿ: ನೇಜಾರಿನಲ್ಲಿ ಮುಸ್ಲಿಂ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿಯ ಕುಡುಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬಂಧಿಸಿದ್ದಾರೆ.
ಈತ ಏರ್ಕ್ರೂ ಇಂಡಿಯ ಕ್ಯಾಬಿನ್ ಕ್ರೂ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು ಸಿಆರ್ ಪಿಎಫ್ ಸಿಬ್ಬಂದಿ ಎನ್ನಲಾಗಿದೆ. ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ. ಮೊಬೈಲ್ ಟವರ್
ಲೊಕೇಶನ್ ಆಧರಿಸಿ ಉಡುಪಿ ಪೊಲೀಸರು ಈತನನ್ನು ಬಂಧಿಸಿದ್ದಾರೆ ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.