ಬೆಂಗಳೂರು: ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇಸ್ ದಾಖಲಾಗಿದೆ. ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಪ್ರಕಾರ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಫೆಬ್ರವರಿ 2ರಂದು ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆ ತಾಯಿ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಎಫ್ ಐ ಆರ್ ನಲ್ಲಿ ಸಂತ್ರಸ್ತೆ ತಾಯಿ ಆರೋಪಿಸಿದ್ದಾಳೆ.