ಹಳೆಯಂಗಡಿ: ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಹಳೆಯಂಗಡಿ ಸಮೀಪದ ತೋಕೂರು ಶಾಲೆ ಬಳಿಯ ನಾಲ್ವರು ದಾರುಣ ಮೃತಪಟ್ಟ ಘಟನೆ ಇಂದು ನಡೆದಿದೆ.
ಮೃತರನ್ನು ತೋಕೂರು ನಿವಾಸಿ
ಶಮೀಮ್ ಮತ್ತು ಝರೀನಾ ದಂಪತಿಯ ಪುತ್ರಿ ಹಿಬಾ
( 29) ಆಕೆಯ ಪತಿ ಮುಹಮ್ಮದ್ ರಮೀಝ್ (34)
ಮಕ್ಕಳಾದ ಆರೂಶ್ (3) ಮತ್ತು ರಾಹ ( 3ತಿಂಗಳು)
ಎಂದು ಗುರುತಿಸಲಾಗಿದೆ.
ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದ ತೋಕೂರು ಸರಕಾರಿ ಶಾಲೆಯ ಪಕ್ಕದ ಮನೆಯ ನಿವಾಸಿಗಳಾದ ದಂಪತಿ, 40 ದಿನದ ಹಸುಗೂಸು ಸೇರಿದಂತೆ ನಾಲ್ಕು ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ ಎನ್ನಲಾಗಿದೆ.
ಕಾರಿನಲ್ಲಿದ್ದ ಇನ್ನೊಂದು ಮಗು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಮನೆಯಲ್ಲಿ ನೀರವ ಮೌನ ನೆಲೆಸಿದೆ.