ಮಂಗಳೂರು: “ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗ್ಯ ಅಭ್ಯರ್ಥಿಯನ್ನು ನಿಲ್ಲಿಸಿದ್ದಾರೆ. ಇನ್ನು ದೇವರ ಕೈಯಲ್ಲಿದೆ. ದೇವರು ನಮ್ಮ ಹಿಂದೆ ಇದ್ದಾರೆ. ಈ ಬಾರಿ ಪದ್ಮರಾಜ್ ಗೆಲುವು ಖಂಡಿತಾ” ಎಂದು ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಪ್ರಚಾರಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಮುಂದೆ ಮಾತಾಡಿದ ಅವರು, “ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಈ ಬಾರಿ ಗೆಲುವು ದಾಖಲಿಸುತ್ತಾರೆ. ಯುವಕನಿಗೆ ಪಕ್ಷ ಟಿಕೆಟ್ ನೀಡಿರುವುದು ಸಂತಸದ ವಿಚಾರ” ಎಂದರು.