“ಎಸ್‌ಸಿಡಿಸಿಸಿ ಬ್ಯಾಂಕ್ ರೂ.79.09 ಕೋಟಿ ಸಾರ್ವಕಾಲಿಕ ದಾಖಲೆಯ ಲಾಭ” -ಡಾ. ಎಂ.ಎನ್. ರಾಜೇಂದ್ರ ಕುಮಾರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಭಿವೃದ್ಧಿಯ ಮುಂಚೂಣಿಯಲ್ಲಿದ್ದು, ತನ್ನ 110 ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀಡುತ್ತಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ತನ್ನ 113 ಶಾಖೆಗಳ ಮೂಲಕ ಉತ್ಕೃಷ್ಠ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ವರದಿ ವರ್ಷದಲ್ಲಿ ಅಮೋಘ ಸಾಧನೆಗೈದು, ದಿನಾಂಕ 31-03-2024ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ ರೂ.79.09 ಕೋಟಿ ಲಾಭ ಗಳಿಸಿದೆ. ಇದು ಕಳೆದ ವರ್ಷದ ಲಾಭ (ರೂ.61.29 ಕೋಟಿ) ಕ್ಕಿಂತ ಶೇಕಡ 29.04 ಏರಿಕೆಯಾಗಿದೆ. ಇದು ಎಸ್‌ಸಿಡಿಸಿಸಿ ಬ್ಯಾಂಕ್‌ನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್
“ಸಹಕಾರ” ಎಂಬ ಮನೋಧರ್ಮವನ್ನು ಸಮಾಜಮುಖಿ ಕಾರ್ಯಗಳಲ್ಲಿ ಅಂತರ್ಗತಗೊಳಿಸಿ ಜನಸಾಮಾನ್ಯರ ಬ್ಯಾಂಕ್ ಆಗಿ ಗುರುತಿಸಿಕೊಂಡಿದೆ. ವರದಿ ವರ್ಷದಲ್ಲಿ ರೂ.15540.80 ಕೋಟಿ ರೂಪಾಯಿಗಳ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ (ರೂ.13514.51 ಕೋಟಿ) ಈ ಬಾರಿ ಶೇ.14.99 ಏರಿಕೆಯನ್ನು ಕಂಡಿದೆ. 24-25ನೇ ಸಾಲಿಗೆ ರೂ.18,000.00 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ. ರೂ.7221.37 ಕೋಟಿ ಠೇವಣಿ ಸಂಗ್ರಹಣೆಯಲ್ಲಿ ಎಲ್ಲಾ ಬ್ಯಾಂಕ್‌ಗಳಲ್ಲೂ ಸ್ಪರ್ಧೆ ಇದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಠೇವಣಾತಿ ಇಲ್ಲದೆಯೂ ಎಸ್‌ಸಿಡಿಸಿಸಿ ಬ್ಯಾಂಕ್ ತನ್ನ 113 ಶಾಖೆಗಳ ಮುಖಾಂತರ ಒಟ್ಟು ರೂ.7221.37 ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ. ಈ ಮೂಲಕ ಠೇವಣಿ ಸಂಗ್ರಹಣೆಯಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಮುಂಚೂಣಿಯಲ್ಲಿದೆ.
ಸಾಲಿನ ಠೇವಣಿ ಸಂಗ್ರಹಣೆಗಿಂತ ಈ ಬಾರಿ ಶೇ 13.33 ಏರಿಕೆಯಾಗಿದೆ. 6485.12 ಕೋಟಿ ಮುಂಗಡ
ಸ್ಪರ್ಧಾತ್ಮಕ ವ್ಯವಹಾರದಲ್ಲಿ ಬ್ಯಾಂಕ್ ರೂ.6485.12 ಕೋಟಿ ಮುಂಗಡ ನೀಡಿದೆ. ಕೃಷಿ ಹಾಗೂ ಕೃಷಿ ಅಭಿವೃದ್ಧಿಗೆ ಅಲ್ಪಾವಧಿ ಸಾಲವಾಗಿ ರೂ.2032,28 ಕೋಟಿ ರೂಪಾಯಿ, ಮಧ್ಯಮಾವಧಿ ಸಾಲ ರೂ.136.99 ಕೋಟಿ ರೂಪಾಯಿ, ಹೀಗೆ ಕೃಷಿ ಕ್ಷೇತ್ರಕ್ಕೆ ಒಟ್ಟು ರೂ.2169.27 ಕೋಟಿ ರೂಪಾಯಿ ಸಾಲ ನೀಡಲಾಗಿದ್ದು, ಕೃಷಿಯೇತರ ಕ್ಷೇತ್ರಕ್ಕೆ ರೂ.4315,85 ಕೋಟಿ ಸಾಲ ನೀಡಲಾಗಿದೆ. ಕೃಷಿ ಹಾಗೂ
ಕೃಷಿಯೇತರ ಸಾಲಗಳ ಹೊರಬಾಕಿ ರೂ.8319,43 ಕೋಟಿಯಾಗಿರುತ್ತದೆ. ಸತತ 29 ವರ್ಷಗಳಿಂದ ಕೃಷಿ ಸಾಲ ಮರುಪಾವತಿಯಲ್ಲಿ ಶೇಕಡಾ 100ರ ಸಾಧನೆ
ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇಕಡಾ 100% ಮರುಪಾವತಿಯನ್ನು ಕಂಡು ದಾಖಲೆ ನಿರ್ಮಿಸಿ ಸಾಧನೆಗೈದಿದೆ. ಇಂತಹ ಸಾಧನೆಯನ್ನು ಕಳೆದ 29 ವರ್ಷಗಳಿಂದ ಬ್ಯಾಂಕ್‌ ಸತತವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ.

ಬ್ಯಾಂಕ್‌ಗೆ ಒಟ್ಟು 1072 ಸಂಘಗಳು ಸದಸ್ಯರಾಗಿವೆ. ಇವುಗಳ ಪಾಲು ಬಂಡವಾಳ ರೂ.403.59
ಕೋಟಿ ಆಗಿರುತ್ತದೆ. ದುಡಿಯುವ ಬಂಡವಾಳ ರೂ.11379.23 ಕೋಟಿ ಆಗಿದ್ದು, ಇದು ಕಳೆದ ವರ್ಷಕ್ಕಿಂತ (ರೂ.9930.69 ಕೋಟಿ) ಶೇಕಡ 14.59% ರಷ್ಟು ಏರಿಕೆ ಕಂಡಿದೆ. ಬ್ಯಾಂಕ್ ರೂ.261.00 ಕೋಟಿ ವಿವಿಧ ನಿಧಿಗಳನ್ನು ಹೊಂದಿರುತ್ತದೆ. ಶೇಕಡ 8.38% ರಷ್ಟು ಏರಿಕೆ ಕಂಡಿದೆ.

“ರುಪೇ” (RuPay) ಕಿಸಾನ್ ಕ್ರೆಡಿಟ್ ಕಾರ್ಡ್
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ
ಸಹಕಾರ ಸಂಘಗಳಲ್ಲಿ ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆಯನ್ನು ಹೊಂದಿರುವ ರೈತರಿಗೆ ಬ್ಯಾಂಕ್‌
ರುಪೇ (RuPay) ಕಿಸಾನ್ ಕಾರ್ಡ್‌ನ್ನು ನೀಡಿದೆ. ಈಗಾಗಲೇ 1,37,0 ರುಪೇ ಕಿಸಾನ್ ಕಾರ್ಡ್‌ಗಳನ್ನು
ರೈತರಿಗೆ ವಿತರಿಸಲಾಗಿದೆ. 80,668 ರುಪೇ ಡೆಬಿಟ್ ಕಾರ್ಡ್‌ಗಳನ್ನು ಬ್ಯಾಂಕ್‌ನ ಇತರ ಗ್ರಾಹಕರಿಗೆ
ನೀಡಲಾಗಿದೆ.

ಬ್ಯಾಂಕಿಗೆ 21 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ, 19 ಬಾರಿ ನಬಾರ್ಡ್ ಪ್ರಶಸ್ತಿ ದೊರೆತಿದೆ.
ಎರಡು ಬಾರಿ “ಎಫ್‌ಸಿಬಿಎ” ರಾಷ್ಟ್ರೀಯ ಪ್ರಶಸ್ತಿಯಿಂದ ಬ್ಯಾಂಕ್‌ ಪುರಸ್ಕೃತಗೊಂಡಿದೆ.
ಬ್ಯಾಂಕಿನ ಸರ್ವಾಂಗೀಣ ಸಾಧನೆಗಾಗಿ ಎರಡು ಬಾರಿ ಪ್ರತಿಷ್ಠಿತ “ಬ್ಯಾಂಕ್‌ ಬ್ಲೂ ರಿಬ್ಬನ್ ಪ್ರಶಸ್ತಿ”
ಲಭಿಸಿದೆ.

ಸ್ವ ಸಹಾಯ ಗುಂಪುಗಳ ಸಮರ್ಪಕ ಅನುಷ್ಠಾನದಲ್ಲಿ ಬ್ಯಾಂಕ್‌ಗೆ ರಾಜ್ಯದಲ್ಲೇ ಪ್ರಥಮ ಸ್ಥಾನ.
ಬ್ಯಾಂಕ್ ಒಟ್ಟು 34,474 ಗುಂಪುಗಳನ್ನು ಹೊಂದಿದೆ. ಉಭಯ ಜಿಲ್ಲೆಗಳ ಎಲ್ಲಾ ನವೋದಯ
ಸ್ವಸಹಾಯ ಸಂಘಗಳ ಮಹಿಳಾ ಸದಸ್ಯೆಯರಿಗೆ ಸಮವಸ್ತ್ರ ವಿತರಣೆಯನ್ನು ಮಾಡಲಾಗಿದೆ.
* ಜಿಲ್ಲೆಯಲ್ಲಿ ಒಟ್ಟು 156063 ರೈತರಿಗೆ ಮಂಗಳಾ ಕಿಸಾನ್ ಕ್ರೆಡಿಟ್ ಕಾರ್ಡ್‌ ಸಾಲ ವಿತರಿಸಲಾಗಿದೆ.
89138 ಕಿಸಾನ್ ಕ್ರೆಡಿಟ್ ಕಾರ್ಡುದಾರರಿಗೆ ವೈಯುಕ್ತಿಕ ಅಪಘಾತ ವಿಮಾ ಸೌಲಭ್ಯವನ್ನು
ಒದಗಿಸಲಾಗಿದೆ.
• ಬ್ಯಾಂಕಿನ ಎಲ್ಲಾ ಶಾಖೆಗಳು ಸಂಪೂರ್ಣ ಗಣಕೀಕೃತಗೊಂಡು ಏಕಗವಾಕ್ಷಿ. ಆರ್.ಟಿ.ಜಿ.ಎಸ್/
ನೆಫ್ಟ್ ಹಾಗೂ ಕೋರ್ ಬ್ಯಾಂಕಿಂಗ್‌ನಂತಹ ಉತ್ಕೃಷ್ಟ ಸೇವೆಯನ್ನು ಗ್ರಾಹಕರಿಗೆ ನೀಡುತ್ತಿದೆ.
ಬ್ಯಾಂಕಿನ 19 ಶಾಖೆಗಳು ಸಂಪೂರ್ಣ ಹವಾನಿಯಂತ್ರಿತವಾಗಿ ಕಾರ್ಯನಿರ್ವಹಿಸುತ್ತಿವೆ.
• ಬ್ಯಾಂಕ್ ಮಂಗಳೂರಿನ ಕೇಂದ್ರ ಕಛೇರಿಯಲ್ಲಿರುವ ಕೊಡಿಯಾಲ್‌ ಬೈಲ್ ಶಾಖೆ ಸೇರಿದಂತೆ
ಪುತ್ತೂರು, ಉಪ್ಪಿನಂಗಡಿ, ಸವಣೂರು, ಬೆಳ್ತಂಗಡಿ ಹಾಗೂ ಸಿದ್ದಾಪುರಗಳಲ್ಲಿರುವ ಶಾಖೆಗಳು
ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ.
• ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕ್ ಎನ್ನುವ ಆಶಯದೊಂದಿಗೆ ಸುಸಜ್ಜಿತ ವಾಹನದಲ್ಲಿ (Bank
on Wheel) ಎಲ್ಲಾ ರೀತಿಯ ಬ್ಯಾಂಕಿಂಗ್ ಸೇವೆಯನ್ನು ಹಾಗೂ ಎ.ಟಿ.ಎಂ. ಸೌಲಭ್ಯವನ್ನು
ಕಾರ್ಯರೂಪಕ್ಕೆ ತಂದ ದೇಶದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎನ್ನುವ ಹೆಗ್ಗಳಿಕೆ.
ಈಗಾಗಲೇ ಮಂಗಳೂರು ಹಾಗೂ ಉಡುಪಿಯಲ್ಲಿ ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆಯು
ಕಾರ್ಯರೂಪದಲ್ಲಿದೆ.
ಬ್ಯಾಂಕಿನ ಎಲ್ಲಾ ಶಾಖೆಗಳ ಭದ್ರತೆಯ ಹಿತದೃಷ್ಟಿಯಿಂದ ಸಿಸಿಟಿವಿ ಕೆಮರಾ ಅಳವಡಿಸಲಾಗಿದೆ.
• ಬ್ಯಾಂಕ್ ಸಿಬ್ಬಂದಿಗಳಿಗೆ ಪಿಂಚಣಿ ಯೋಜನೆಯನ್ನು ಕಾರ್ಯರೂಪಕ್ಕೆ ತಂದ ರಾಜ್ಯದ ಮೊದಲ
ಕೇಂದ್ರ ಸಹಕಾರಿ ಬ್ಯಾಂಕ್.
ತರಬೇತಿ ಕೇಂದ್ರ: ಸಹಕಾರಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಈ ಕ್ಷೇತ್ರದ
ಅಭಿವೃದ್ಧಿಗೆ ಶ್ರಮಿಸುತ್ತಿರುವ ಅಧ್ಯಕ್ಷರು ಹಾಗೂ ನಿರ್ದೇಶಕರು ಮತ್ತು ಸದಸ್ಯರಿಗೆ ಸಹಕಾರಿ
ಕ್ಷೇತ್ರದ ಬಗ್ಗೆ ವಿಶೇಷ ಅನುಭವ ನೀಡಲು ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಸುಸಜ್ಜಿತ ತರಬೇತಿ
ಕೇಂದ್ರವನ್ನು ಬ್ಯಾಂಕ್‌ ಹೊಂದಿದೆ.

error: Content is protected !!