ಸುರತ್ಕಲ್: ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ
ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ
ನಿರ್ಮಿತ ಚಿನ್ನದ ಪಲ್ಲಕ್ಕಿಯನ್ನು ಕಟೀಲಿನಿಂದ ವೈಭವದ
ಮೆರವಣಿಗೆಯಲ್ಲಿ ಕೊಂಡೊಯ್ದು ಶಿಬರೂರು
ದೈವಸ್ಥಾನದಲ್ಲಿ ಸಮರ್ಪಿಸಲಾಯಿತು.
ಜೀರ್ಣೋದ್ಧಾರಗೊಂಡ ದೈವಸ್ಥಾನದಲ್ಲಿ ಏ.26ರಂದು
ಬ್ರಹ್ಮಕುಂಭಾಭಿಷೇಕ ಮತ್ತು ನಾಗಮಂಡಲ ಸೇವೆ ನಡೆಯಲಿದ್ದು, ನೂತನ ಚಿನ್ನದ ಪಲ್ಲಕ್ಕಿಯನ್ನು ಭಕ್ತಾದಿಗಳ ಸಹಕಾರದಿಂದ ನಿರ್ಮಿಸಲಾಗಿದೆ. ಸುಮಾರು ಎರಡು ಕೆಜಿಯಷ್ಟು ಬಂಗಾರವನ್ನು ಭಕ್ತಾದಿಗಳೇ ನೀಡಿರುವುದು ವಿಶೇಷವಾಗಿದೆ.
ಕಟೀಲಿನಿಂದ ಶಿಬರೂರಿಗೆ ನಡೆದ ಮೆರವಣಿಗೆಗೆ
ಪಲಿಮಾರು ಶ್ರೀ ವಿದ್ಯಾಧೀಶ ಸ್ವಾಮೀಜಿ, ವೇದವ್ಯಾಸ
ತಂತ್ರಿ ಕಟೀಲಿನ ಅಸ್ರಣ್ಣರು, ಕೊಡೆತ್ತೂರು ಗುತ್ತು ಸನತ್
ಕುಮಾರ್ ಶೆಟ್ಟಿ, ಜೀರ್ಣೋದ್ದಾರ ಮತ್ತು
ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಏಳಿಂಜೆ
ಕೋಂಜಾಲುಗುತ್ತು ಪ್ರಭಾಕರ ಶೆಟ್ಟಿ, ಗುತ್ತಿನಾರ್
ಉಮೇಶ್ ಎನ್ ಶೆಟ್ಟಿ, ಬ್ರಹ್ಮಕಲಶೋತ್ಸವ ಮತ್ತು
ಜೀಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಸದಸ್ಯರು,
ಶಿಬರೂರು-ಅತ್ತೂರು ಕೊಡೆತ್ತೂರು ಗ್ರಾಮಸ್ಥರು
ಉಪಸ್ಥಿತರಿದ್ದರು.