ಬೈಕಂಪಾಡಿ: ಅಂದರ್ ಬಾಹರ್, 9 ಮಂದಿ ಅಂದರ್

ಸುರತ್ಕಲ್: ಬೈಕಂಪಾಡಿ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಜೂಜಾಟವಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಹಾಗೂ ಪಣಂಬೂರು ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಅಕ್ರಮ ಜೂಜಾಟವಾಡುತ್ತಿದ್ದ ಮಹಮ್ಮದ್ ಹನೀಫ್, ಜಾಕೀರ್ ಅಹಮ್ಮದ್, ವಿಲ್ಪ್ರೇಡ್ ಡಿಸೋಜಾ, ಅನಿಲ್ ಕುಮಾರ್, ಮುರ್ತೋಝ ಇಮಾಮ್ ಸಾಬ್, ಶಶಿ ದೇವಾಡಿಗ, ಮೈಲಾರಪ್ಪ, ರಾಯ್ ಡಯಾಸ್, ಜೋನ್ ರಾಬರ್ಟ್ ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ರೂ. 11,265/- ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

error: Content is protected !!