ಮುಲ್ಕಿ: ನೆಹರೂ ಯುವ ಕೇಂದ್ರ ಮಂಗಳೂರು, ಗ್ರಾಮೀಣ ಮಾಹಿತಿ ತಂತ್ರಜ್ಞಾನ ಮತ್ತು ಯುವ ಅಭಿವೃದ್ಧಿ ಕೇಂದ್ರ ತೋಕೂರು, ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ, ಮತ್ತು ಮಹಿಳಾ ಮಂಡಲ ತೋಕೂರು ಇವರ ಸಂಯುಕ್ತ ಆಶ್ರಯದಲ್ಲಿ 10ನೇ ವಿಶ್ವ ಯೋಗ ದಿನಾಚರಣೆಯು ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಹರಿದಾಸ್ ಭಟ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಡುಪಣಂಬೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಹೇಮಂತ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಯೋಗ ಶಿಕ್ಷಕ ಉದಯ ಕುಮಾರರವರ ಮಾರ್ಗದರ್ಶನದಲ್ಲಿ ಯೋಗಾಭ್ಯಾಸವನ್ನು ಮಾಡಲಾಯಿತು ಸುಮಾರು 40 ಯೋಗಾರ್ಥಿಗಳು ಭಾಗವಹಿಸಿದ್ದರು.
ಯುವಕ ಸಂಘದ ಅಧ್ಯಕ್ಷ ರಮೇಶ್ ದೇವಾಡಿಗ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು ಮತ್ತು ಮಹಿಳಾ ಮಂಡಲದ ಅಧ್ಯಕ್ಷರಾದ ಪ್ರೇಮಲತಾ ಶೆಟ್ಟಿಗಾರ್ ವಂದಿಸಿದರು