ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ನಾಳೆ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ.
ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿವತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ. ಜತೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಪ್ರೌಢಶಾಲೆಗಳಿಗೆ ನಾಳೆ ರಜೆಯನ್ನು ಘೋಷಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರವರು ಆದೇಶಿಸಿದ್ದಾರೆ.