ಮಂಗಳೂರು: 47 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ದೂರು ದಾಖಲಿಸಿದ್ದಾರೆ
2023ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ದೌರ್ಜನ್ಯದ ಫೋಟೋ, ಸೆಲ್ಫಿ ವಿಡಿಯೋ ಕೂಡ ತೆಗೆದುಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಮಹಿಳೆಯು ನೀಡಿದ ದೂರಿನ ಮೇರೆಗೆ ಹಳೆಯ ಐಪಿಸಿ ಸೆಕ್ಷನ್ 417, 354ಎ, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಅರುಣ್ ಕುಮಾರ್ ಪುತ್ತಿಲ ಮಹಿಳೆಯೊಂದಿಗೆ ಮಾತನಾಡಿದ್ದು ಎನ್ನಲಾಗಿದ್ದ ಆಡಿಯೋವೊಂದು ಇತ್ತೀಚೆಗೆ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು.