ಮುಕ್ಕ: ಭೀಕರ ಅಪಘಾತಕ್ಕೆ ಹಳೆಯಂಗಡಿಯ ಯುವಕ ಬಲಿ!

ಸುರತ್ಕಲ್: ಭೀಕರ ರಸ್ತೆ ಅಪಘಾತದಲ್ಲಿ ಹಳೆಯಂಗಡಿ ನಿವಾಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ (27) ಎಂದು ಗುರುತಿಸಲಾಗಿದೆ.
ಗಣೇಶ್ ಪಣಂಬೂರು ಬಂದರ್ ನಲ್ಲಿ ಉದ್ಯೋಗದಲ್ಲಿದ್ದು, ಬೆಳಗ್ಗೆ 7ಗಂಟೆಯ ಸುಮಾರಿಗೆ ಕೆಲಸಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.
ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ಸ್ಲೋ ಮಾಡಿದ್ದು ಈ ವೇಳೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!