ಬೆಳ್ಳಾಯರು ರೈಲ್ವೇ ಹಳಿಯಲ್ಲಿ ಆತ್ಮಹತ್ಯೆಗೈದ ಯುವಕನ ಗುರುತು ಪತ್ತೆ!

ಮೂಲ್ಕಿ: ಇಲ್ಲಿಗೆ ಸಮೀಪದ ಬೆಳ್ಳಾಯರು ರೈಲ್ವೇ ಹಳಿಯಲ್ಲಿ ಶುಕ್ರವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡ ಯುವಕನ ಗುರುತು ಪತ್ತೆಯಾಗಿದ್ದು ಆತನನ್ನು ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್(32) ಎಂದು ಹೆಸರಿಸಲಾಗಿದೆ.
ಪಕ್ಷಿಕೆರೆ ಜಂಕ್ಷನ್ ನಲ್ಲಿ “ಹೋಟೆಲ್ ಕಾರ್ತಿಕ್” ನಡೆಸುತ್ತಿರುವ ಜನಾರ್ಧನ ಭಟ್ ಎಂಬವರ ಮೂವರು ಮಕ್ಕಳಲ್ಲಿ ಒಬ್ಬನಾದ ಕಾರ್ತಿಕ್ ಕದ್ರಿಯ ಸೊಸೈಟಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಶುಕ್ರವಾರ ಮಧ್ಯಾಹ್ನ ತನ್ನ ಸ್ಕೂಟರ್ ಅನ್ನು ಕಲ್ಲಾಪು ದೇವಸ್ಥಾನ ಬಳಿ ನಿಲ್ಲಿಸಿ ರೈಲು ಹಳಿಯಲ್ಲಿ ಹೋಗಿದ್ದು ಬಳಿಕ ಛಿದ್ರಗೊಂಡ ಸ್ಥಿತಿಯಲ್ಲಿ ಮೃತದೇಹ ಪಟ್ಟೆಯಾಗಿತ್ತು. ಮೂಲ್ಕಿ ಠಾಣಾ ಪೊಲೀಸರು ಪ್ರಕರಣ ದಾಖಳಿಸಿಕೊಂಡಿದ್ದಾರೆ. ಕಾರ್ತಿಕ್ ಗೆ ಮದುವೆಯಾಗಿ ಸಣ್ಣಪ್ರಾಯದ ಮಗು ಇದ್ದು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

error: Content is protected !!