ಹೆಬ್ರಿ: ಸೋಮವಾರ ರಾತ್ರಿ 5 ಮಂದಿ ನಕ್ಸಲರ ತಂಡ ಕಬ್ಬಿನಾಲೆ ಸೀತಂಬೈಲು ಎಂಬಲ್ಲಿ ರೇಷನ್ ಸಂಗ್ರಹಕ್ಕೆ ಬಂದಾಗ ಎಎನ್ ಎಫ್ ತಂಡ ಕಾರ್ಯಾಚರಣೆ ನಡೆಸಿದ್ದು ಈ ವೇಳೆ ನಕ್ಸಲ್ ನಾಯಕ ವಿಕ್ರಂ ಗೌಡ ಗುಂಡೇಟಿಗೆ ಬಲಿಯಾಗಿದ್ದಾನೆ.
ನಕ್ಸಲರು ಹಾಗೂ ಪೊಲೀಸರ ಮಧ್ಯೆ ದಾಳಿ-ಪ್ರತಿದಾಳಿ ನಡೆದಿದ್ದು ನಾಲ್ವರು ಕಾಡಿನಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಎಎನ್ ಎಫ್ ಕೂಂಬಿಂಗ್ ಮುಂದುವರಿಸಿದ್ದು, ಇನ್ನುಳಿದವರಿಗಾಗಿ ಶೋಧ ನಡೆಸುತ್ತಿದೆ.